ಬೆಂಗಳೂರು:ರಾಜ್ಯದಲ್ಲಿ ಈಗಾಗಲೇ ಹೆಚ್ಚಾಗುತ್ತಿರುವ ಬಿಸಿಲಿನ ಬೇಗೆ ತೀವ್ರಗೊಳ್ಳುತ್ತಿದ್ದು, ಇದು ಸರ್ಕಾರಿ ಕಚೇರಿಗಳ ದೈನಂದಿನ ವೇಳಾಪಟ್ಟಿ ಮೇಲೂ ಪರಿಣಾಮ ಬೀರಿದೆ. ಅರ್ಥಾತ್, ಬಿಸಿಲಿನ ಬೇಗೆ ಹಿನ್ನೆಲೆಯಲ್ಲಿ ಇದೀಗ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆ ಸಮಯವೂ ಬದಲಾಗಲಿದ್ದು, ನಾಳೆಯಿಂದಲೇ ಜಾರಿ ಆಗಲಿದೆ.
ಬಿಸಿಲಿನ ತಾಪಮಾನ ಗರಿಷ್ಠಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕಲಬುರಗಿ ವಿಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಆಗಲಿದೆ.
ಇದನ್ನೂ ಓದಿ:ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ
ಈ ಮೇಲಿನ ಜಿಲ್ಲಾ ವ್ಯಾಪ್ತಿಗಳ ಸರ್ಕಾರಿ ಕಚೇರಿಗಳು ಏ.12ರಿಂದ ಮೇ 31ರ ವರೆಗೆ ಬದಲಾದ ವೇಳಾಪಟ್ಟಿ ಪ್ರಕಾರ ಕೆಲಸ ನಿರ್ವಹಿಸಲಿವೆ. ಅಂದರೆ ಇಲ್ಲಿನ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬೆಳಗ್ಗೆ 8ರಿಂದ ಮಧ್ಯಾನ 1.30ರ ವರೆಗೆ ಮಾತ್ರ ಇರಲಿವೆ. ಆದರೆ ಕರೊನಾ ತುರ್ತು ಸಂದರ್ಭಗಳಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನಿರ್ದೇಶನದಂತೆ ಕೆಲಸ ನಿರ್ವಹಿಸಬೇಕು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎಸ್. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ದೇವರ ಜಮೀನಿಗೆ ಕನ್ನ: ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಭೂಮಿ ಒತ್ತುವರಿ

ಕೆಲಸದ ಒತ್ತಡ ತಾಳಲಾಗುತ್ತಿಲ್ಲ… ಸಾಯದೇ ದಾರಿ ಇಲ್ಲ… ಡೆತ್​ನೋಟ್​ ಬರೆದು ಬ್ಯಾಂಕ್​ ಮ್ಯಾನೇಜರ್​ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
