ರುದ್ರಪ್ರಯಾಗ:ಕೇದಾರನಾಥದಲ್ಲಿ ಹೆಲಿಕಾಪ್ಟರ್​ ಹಿಂಬದಿ ಇರುವ ಟೈಲ್ ರೋಟರ್‌ಗೆ ಸಿಲುಕಿ ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (ಯುಸಿಎಡಿಎ) ಅಧಿಕಾರಿ ಒಬ್ಬರು ಭಾನುವಾರ ಸಾವನ್ನಪ್ಪಿದ್ದಾರೆ.
ಕೇದಾರನಾಥದ ಗರ್ವಾಲ್ ಮಂಡಲ್ ವಿಕಾಸ್ ನಿಗಮ್ (ಜಿಎಂವಿಎನ್) ಹೆಲಿಪ್ಯಾಡ್‌ನಲ್ಲಿ ಈ ಘಟನೆ ಸಂಭವಿಸಿರುವ ಬಗ್ಗೆ ರುದ್ರಪ್ರಯಾಗ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಶಾಖ ಅಶೋಕ್ ಭದನೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಸಿದ್ದರಾಮಯ್ಯಗೆ ವಾಯುಯಾನ ಕಂಟಕ?; ನಿನ್ನೆ ವಿಮಾನ, ಇಂದು ಹೆಲಿಕಾಪ್ಟರ್​ ಪ್ರಯಾಣದಲ್ಲಿ ಸಮಸ್ಯೆ!
ಹೆಲಿಕಾಪ್ಟರ್​ ನ ಟೈಲ್ ರೋಟರ್‌ಗೆ ಸಿಲುಕಿ ಅಮಿತ್ ಸೈನಿ ಅವರ ಕುತ್ತಿಗೆಗೆ ತೀವ್ರ ಗಾಯವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಕಾಡಿನಲ್ಲಿದ್ದ ಹಸುಗಳನ್ನು ನಿರ್ನಾಮ ಮಾಡಲು ಹೆಲಿಕಾಪ್ಟರ್​ನಲ್ಲಿ ಶಾರ್ಪ್​ ಶೂಟರ್​​ಗಳನ್ನು ಕಳಿಸಿದರು!
ಏಪ್ರಿಲ್ 25 ರಂದು ತೆರೆಯಲಿರುವ ದೇವಾಲಯಕ್ಕೆ ಹೆಲಿಕಾಪ್ಟರ್​ ಸೇವೆಗಳ ವ್ಯವಸ್ಥೆಯನ್ನು ಪರಿಶೀಲಿಸಲು ಹೆಲಿಪ್ಯಾಡ್‌ಗೆ ಭೇಟಿ ನೀಡಿದ್ದ ಯುಸಿಎಡಿಎ ತಂಡದ ಭಾಗವಾಗಿ ಅಮಿತ್​ ಸೈನಿ ಇದ್ದರು. ಸದ್ಯ ಕೇದಾರನಾಥದಲ್ಲಿ ಸಾಮಾನ್ಯ ಹಿಮಪಾತ ಮುಂದುವರಿದಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fifteen =
Remember me
