ಬೆಂಗಳೂರು:ಯಾದಗಿರಿ ನಗರ ಸೈಬರ್​ ಠಾಣೆ ಪಿಎಸ್​ಐ ಪರಶುರಾಮ್​ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದೆ.
ಪಿಎಸ್​ಐ ಪರಶುರಾಮ್​ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ. ಕುಟುಂಬಸ್ಥರು ಪರಶುರಾಮ್​ ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಿಐಡಿ ವರ್ಗಾಯಿಸಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಘಟನೆ ನಡೆದ 17 ಗಂಟೆಗಳ ಬಳಿಕ ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ  ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ​ 352, 108 (3), 5, ಬಿಎನ್ಎಸ್ 2023 ಮತ್ತು ಕಲಂ 3(1), (ಆರ್), (ಎಸ್), 3 (ವಿ) ಸೇರಿದಂತೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 11 =
Remember me
