ಚಿಕ್ಕೋಡಿ:ಸರ್ಕಾರಿ ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಶಿಕ್ಷಕಿಯೊಬ್ಬರು ಇದೀಗ ಅಮಾನತು ಆಗುವ ಭೀತಿಯಲ್ಲಿ ಇದ್ದಾರೆ. ಹಾಗಾದರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಹುಟ್ಟುಹಬ್ಬ ಆಚರಿಸಿಕೊಳ್ಳುವುದೇ ತಪ್ಪಾ? ಹೌದು ಎನ್ನುತ್ತೆ ಸರ್ಕಾರಿ ನಿಯಮಗಳು!
ನವೆಂಬರ್ 5ನೇ ತಾರೀಕಿನಂದು ಜಲಾಲಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿಯೇ ಡಿ.ಡಿ.ಕಾಂಬಳೆ ಎನ್ನುವ ಶಿಕ್ಷಕಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಶಾಲಾ ಅವಧಿ ಮುಗಿದ ಮೇಲೆ ಶಿಕ್ಷಕಿ ಕಾಂಬಳೆ ತಮ್ಮ ಹುಟ್ಟುಹಬ್ಬವನ್ನ ಮಕ್ಕಳೊಡನೆ ಸೇರಿಕೊಂಡು ಆಚರಿಸಿದ್ದರು. ಆದರೆ ನಿಯಮದ ಪ್ರಕಾರಸರ್ಕಾರಿ, ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಸಿಬ್ಬಂದಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳುವಂತಿಲ್ಲ.
ಶಾಲಾ ಶಿಕ್ಷಕಿಯರೇ ಈ ರೀತಿ ಮಾಡಿದ್ರೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಎಂದು ಸರ್ಕಾರ ಈ ನಿಯಮ ರೂಪಿಸಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಅಮಾನತು ಮಾಡಬೇಕು ಎಂದು ಶಾಲಾ ಎಸ್‌ಡಿಎಂಸಿ ಸದಸ್ಯರು ಒತ್ತಾಯಿಸುತ್ತಿದ್ದಾರೆ. ಈಗ ಶಿಕ್ಷಕಿ ಕಾಂಬಳೆಗೆ ಅಮಾನತುಗೊಳ್ಳುವ ಭೀತಿ ಎದುರಾಗಿದೆ. ಈಗ ಶಾಲೆಯ ಎಸ್​ಡಿಎಂಸಿ ಸದಸ್ಯರು ರಾಯಬಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಿಕ್ಷಕಿಯನ್ನು ಅಮಾನತು ಮಾಡಬೇಕು ಎಂದು ಮನವಿ ಕೂಡ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
