ಬೆಂಗಳೂರುರಾಜ್ಯದಲ್ಲಿ ಸರ್ಕಾರಿ ಶಾಲಾ ಶಿಕ್ಷಕರೇ ನಂ.1 ಶಿಕ್ಷಕರಾಗಿದ್ದಾರೆ. ಆದರೆ, ಅವರನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳುವ ಕೆಲಸಗಳಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಚಾಮರಾಜಪೇಟೆಯಲ್ಲಿರುವ ಹಳೇ ಕೋಟೆ ಕೆಪಿಎಸ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಸಸ್ಯ ಶ್ಯಾಮಲಾ’ ಕಾರ್ಯಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಹಳೇ ಕೋಟೆ ಶಾಲೆಯಲ್ಲಿ ವಿಧಾನಸೌಧವನ್ನು ನಿರ್ಮಿಸಿದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರು ವ್ಯಾಸಂಗ ಮಾಡಿದ್ದರು. ಅದರಂತೆ ಆಯಾ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಗಣ್ಯರ ಸಾಧನೆಯನ್ನು ಪಟ್ಟಿ ಮಾಡಿ ಶಾಲೆಗಳಲ್ಲಿ ಲಕಗಳಾಗುವ ಕೆಲಸವಾಗಬೇಕು. ಇದರಿಂದ ಸರ್ಕಾರಿ ಶಾಲೆಗಳ ಗೌರವ ಮತ್ತು ಶಕ್ತಿ ಏನೆಂದು ತಿಳಿಯಲಿದೆ ಎಂದು ಹೇಳಿದರು.
ಸಸಿಗಳನ್ನು ಪೋಷಣೆ ಮಾಡಲು ವಿದ್ಯಾರ್ಥಿಗಳು ಊಟ ಮಾಡಿದ ನಂತರ ತಮ್ಮ ಕೈಯನ್ನು ಗಿಡದ ಬುಡದಲ್ಲಿ ತೊಳೆಯುವುದು ಕುಡಿಯುವ ಡಬ್ಬದಲ್ಲಿನ ನೀರನ್ನು ಪೋಲು ಮಾಡದೆ, ಗಿಡಗಳಿಗೆ ಹಾಕುವ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದೇ ವೇಳೆ ಗಿಡಗಳನ್ನು ಪೋಷಣೆ ಮಾಡುವ ಕುರಿತು ಪ್ರತಿಜ್ಞೆ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ, ಬೆಂ.ದಕ್ಷಿಣ ಜಿಲ್ಲಾ ಉಪ ನಿರ್ದೇಶಕ ನಿಂಗರಾಜಪ್ಪ ಕೆ.ಬಿ, ಶಾಲೆಯ ಪ್ರಾಂಶುಪಾಲ ನಾರಾಯಣಪ್ಪ, ಉಪ ಪ್ರಾಂಶುಪಾಲೆ ಹೇಮಾ ಎಸ್. ಸೇರಿ ಇತರೆ ಶಿಕ್ಷಕ ವರ್ಗ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 10 =
Remember me
