ಬೆಂಗಳೂರು:ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು-ಉಪನ್ಯಾಸಕರ ಸಂಘ, ವಿಧಾನಪರಿಷತ್ತಿನ ಸದಸ್ಯರು ಧಾವಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​.ಸುರೇಶ್​ ಕುಮಾರ್​ ಮನವಿ ಮಾಡಿದರು.
ಬುಧವಾರ ಶಿಕ್ಷಕ ಸಂಘಟನೆಗಳ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ಸಚಿವರು ವರ್ಚುವಲ್​ನಲ್ಲಿ ಸಭೆ ನಡೆಸಿದರು. ಇಂತಹ ಆರ್ಥಿಕ ಸಂಕಷ್ಟದಲ್ಲೂ ಸರ್ಕಾರಿ ನೌಕರರಿಗೆ ಸರ್ಕಾರ ವೇತನ ಕಡಿತ ಮಾಡಿಲ್ಲ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಎಲ್ಲರಿಗೂ ಅರಿವಿದೆ. ಈ ಹಿನ್ನೆಲೆಯಲ್ಲಿ ನಮ್ಮದೇ ಖಾಸಗಿ ಶಾಲಾ ಶಿಕ್ಷಕ ಸಮುದಾಯದ ನೆರವಿಗೆ ಬರಬೇಕಾದ್ದು ನಮ್ಮ ಜವಾಬ್ದಾರಿಯಾಗಿದೆ ಎಂಬುದನ್ನು ನೆರವು ನೀಡುವ ಮೂಲಕ ಮನದಟ್ಟುಪಡಿಸಬೇಕೆಂದರು.
ಶಿಕ್ಷಕ ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರು ವೇತನ ಮೊತ್ತವನ್ನು ಶಿಕ್ಷಕರಿಗೆ ನೀಡುವುದಾಗಿ ಘೋಷಿಸಿದರು. ಇದೇ ರೀತಿ ಎಲ್ಲರೂ ಮಾದರಿಯಾಗಿ ಮುಂದೆ ಬರಬೇಕಿದೆ. ಇಲಾಖೆಯ ಆಂತರಿಕ ಆರ್ಥಿಕ ಸಂಪನ್ಮೂಲಗಳನ್ನು ಬಳಸಲು ಸಹ ಆಲೋಚನೆ ನಡೆಸುತ್ತಿದ್ದು, ಸಂಪನ್ಮೂಲ ಸಂಗ್ರಹಣೆಗೆ ಪ್ರಸ್ತಾವನೆ ಮಂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಒಂದು ವೇಳೆ ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರ ವೇತನ ಕಟಾವಣೆ ಮಾಡುತ್ತೇವೆಂದು ಸರ್ಕಾರ ನಿರ್ಧರಿಸಿದಲ್ಲಿ, ಈಗ ನೀಡಲು ಶಿಕ್ಷಕರು ಇಚ್ಛಿಸುವ ಮೊತ್ತವನ್ನು ವಿನಾಯಿತಿ ಪಡೆಯಲು ಆರ್ಥಿಕ ಇಲಾಖೆಯಿಂದ ಕೋರಲಾಗುವುದು ಎಂದು ತಿಳಿಸಿದರು.
ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್​.ಕೆ. ಮಂಜುನಾಥ್​, ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್​.ನಿಂಗೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಗೌಡನ ಪಾಟೀಲ್​, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಸರ್ಕಾರದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದರು. ವಿಧಾನ ಪರಿಷತ್ತಿನ ಸದಸ್ಯರಾದ ಡಾ.ವೈ.ಎ.ನಾರಾಯಣ ಸ್ವಾಮಿ, ಪುಟ್ಟಣ್ಣ, ಅರುಣ ಶಹಾಪುರ, ಶಶೀಲ್​ ನಮೋಷಿ, ಅ.ದೇವೇಗೌಡ ಇತರರು ಸಭೆಯಲ್ಲಿದ್ದರು.
ಒಂಬತ್ತು ತಿಂಗಳವರೆಗೂ ಸೋಂಕಿತರ ಸೇವೆ; ಹೆರಿಗೆಯಾಗಿ ಕೆಲವೇ ದಿನಕ್ಕೆ ಪ್ರಾಣಬಿಟ್ಟ ನರ್ಸ್​!

ಬಾಬಾ ರಾಮ್​ದೇವ್​ಗೆ 1000 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ನೀಡಿದ ಐಎಂಎ; ಕ್ಷಮೆಯಾಚಿಸಿ ಇಲ್ಲ ದುಡ್ಡು ಕೊಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + one =
Remember me
