ಬೆಂಗಳೂರು: ಲಾಕ್​ಡೌನ್​ ಹಿನ್ನೆಲೆಯಲ್ಲಿ ಸರ್ಕಾರ ಒದಗಿಸಿರುವ ಪರಿಹಾರ ಸಾಮಗ್ರಿಗಳ ಮೇಲೆ ಶಾಸಕ ಅರವಿಂದ ಲಿಂಬಾವಳಿ ತಮ್ಮ ಪೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಇದಕ್ಕೆ ಸಿಎಂ ಯಡಿಯೂರಪ್ಪ ಉತ್ತರಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಎಂಬುದನ್ನು ಕೂಡಲೇ ಅವರು ಸ್ಪಷ್ಟಪಡಿಸಬೇಕು ಎಂದು ಸರಣಿ ಟ್ವೀಟ್​ ಮಾಡಿ ಆಗ್ರಹಿಸಿದ್ದಾರೆ.
ಅರವಿಂದ ಲಿಂಬಾವಳಿ ಅವರು ಸರ್ಕಾರ ವಿತರಿಸುತ್ತಿರುವ ಪರಿಹಾರ ಸಾಮಗ್ರಿಗಳ ಮೇಲೆ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು.
ಒಂದು ಸಮುದಾಯವನ್ನು ಕರೊನಾ ಸೋಂಕಿಗೆ ಸಮೀಕರಿಸುತ್ತಿರುವ ಬಗ್ಗೆ ದಿವ್ಯ ಮೌನ ತಾಳಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಬಡ ಕಾರ್ಮಿಕರ ಪರಿಹಾರ ಸಾಮಗ್ರಿಗೆ ಕೆಲ ಪ್ರಚಾರ ಪ್ರಿಯರು ತಮ್ಮ ಫೋಟೋ ಅಂಟಿಸಿಕೊಂಡು ಹಂಚುವುದಕ್ಕೆ ಅನುಮತಿ ನೀಡಿದ್ದಾರೆಯೇ ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಿಶ್ವದಲ್ಲಿ ಕರೊನಾ ಸೋಂಕಿಗೆ 88 ಸಾವಿರ ಬಲಿ: ವಿಶ್ವಸಂಸ್ಥೆ ಭದ್ರತಾ ಸಮಿತಿ ಸಭೆ ನಡೆಸಲು ಮುಂದಾದ ಶಕ್ತಿಶಾಲಿ ರಾಷ್ಟ್ರಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
