ಬೆಂಗಳೂರು:ಸರ್ಕಾರಿ ಸಿಬ್ಬಂದಿ ಸಮಾನಾಂತರ ಹುದ್ದೆಗೆ ನಿಯೋಜನೆ ಮೇಲೆ ತೆರಳುವುದಕ್ಕೆ ಸರ್ಕಾರ ಮತ್ತಷ್ಟು ಕಟ್ಟುಪಾಡುಗಳನ್ನು ವಿಧಿಸಿದೆ. ಅಲ್ಲದೆ, ಸೂಚನೆಗಳನ್ನು ಉಲ್ಲಂಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನೂ ನೀಡಿದೆ.
ಸರ್ಕಾರಿ ನೌಕರರಿಗೆ ಸಮಾನಾಂತರ ಹುದ್ದೆಗೆ ನಿಯೋಜಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ವಿಶೇಷ ಆದೇಶಗಳಿರದ ಹೊರತು, ಸಾಮಾನ್ಯವಾಗಿ ನಿಯೋಜನೆ ಅವಧಿಯನ್ನು ಐದು ವರ್ಷಗಳಿಗೆ ಮಿತಿಗೊಳಿಸಲಾಗಿದೆ.
ನಿಯೋಜನೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಜತೆಗೆ ಹೆಚ್ಚುವರಿಯಾಗಿ ನಾಲ್ಕು ಅಂಶಗಳನ್ನು ಸೇರಿಸಲಾಗಿದೆ. ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.
– ವೃಂದ ಮತ್ತು ನೇಮಕ ನಿಯಮಗಳಲ್ಲಿ ಬೇರೆ ಇಲಾಖೆಯಿಂದ ನಿಯೋಜನೆಗೆ ಅವಕಾಶ ಕಲ್ಪಿಸದೇ ಇರುವ ಹುದ್ದೆಗಳಿಗೆ ನಿಯೋಜನೆ ಮಾಡುವುದಕ್ಕೆ ನಿರ್ಬಂಧ
– ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯೊಂದಿಗೆ ನಿಯೋಜನೆಯ ಮೇಲೆ ಮುಂದುವರಿದ ಅಧಿಕಾರಿ/ ನೌಕರರು ಒಂದು ವೇಳೆ ಗರಿಷ್ಠ ಐದು ವರ್ಷಗಳ ಅವಧಿ ಪೂರ್ಣಗೊಳಿಸಿದ್ದರೆ ಹಾಗೂ ವಿಶೇಷ ಆದೇಶಗಳಿಲ್ಲದೆ ನಿಯೋಜನೆ ಮೇಲೆ ಮುಂದುವರಿದಿದ್ದಲ್ಲಿ ಅಂತಹವರನ್ನು ಕೂಡಲೇ ಮಾತೃ ಇಲಾಖೆಗೆ ಹಿಂತಿರುಗಿಸಲು ಕ್ರಮ
– ವೃಂದ ಮತ್ತು ನೆಮಕ ನಿಯಮಗಳಲ್ಲಿ ನಿಯೋಜನೆಗೆ ಅವಕಾಶವಿರುವ ಹುದ್ದೆಗಳಿಗೆ ಮಾತ್ರ ಆ ಹುದ್ದೆಗೆ ಸಮಾನ ದರ್ಜೆ/ ಹುದ್ದೆ ಹೊಂದಿರದ ಅಧಿಕಾರ/ ನೌಕರರನ್ನು ಅನಿವಾರ್ಯ ಪ್ರಸಂಗಗಳಲ್ಲಿ ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಮದಂತೆ ನಿಯೋಜನೆ
– ಯಾವುದೇ ಇಲಾಖೆಯಲ್ಲಿಯಾದರೂ ಕೆಳದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆಯ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ ಮಾಡುವುದು ಅಥವಾ ನಿಯೋಜಿಸುವುದಕ್ಕೆ ನಿರ್ಬಂಧ
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:three + eleven =
Remember me
