ಬೆಂಗಳೂರು:ಕಾವೇರಿ ನೀರು ನಿಯಂತ್ರಣ ಸಮಿತಿ ಏನಾದರೂ ಸೂಚಿಸಿರಲಿ. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲವೆಂದು ರಾಜ್ಯ ಸರ್ಕಾರ ಗಟ್ಟಿಯಾಗಿ ನಿಂತರೆ ನಾವೂ ಜತೆಗೆ ನಿಲ್ಲುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳುವ ಮೂಲಕ ಸರ್ಕಾರದ ದೃಢತೆಯನ್ನು ಪರೀಕ್ಷೆಗೊಡ್ಡಿದ್ದಾರೆ.
ಪ್ರತಿದಿನ ಐದು ಸಾವಿರ ಕ್ಯುಸೆಕ್‌ನಂತೆ ತಮಿಳುನಾಡಿಗೆ ಮತ್ತೆ 13 ದಿನ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸಿಡಬ್ಲ್ಯುಆರ್‌ಸಿ ಮಂಗಳವಾರ ನೀಡಿದ ಆದೇಶದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವಸ್ತುಸ್ಥಿತಿ ನೋಡಿದರೆ, ಕಾವೇರಿಯಲ್ಲಿ ಕುಡಿಯಲಿಕ್ಕೂ ನೀರಿಲ್ಲ. ಮತ್ತೆ ಏಳು ಟಿಎಂಸಿ ಅಡಿ ನೀರು ಬಿಡಲು ಹೇಳಿದ್ದಾರೆ. ಮಂಡ್ಯ ಜಿಲ್ಲೆಯೊಂದಕ್ಕೆ 32 ಟಿಎಂಸಿ ಅಡಿ ಬೇಕಿದ್ದರೆ ಈ ತನಕ ಏಳು ಟಿಎಂಸಿ ಅಡಿ ಪೂರೈಸಿದ್ದಾರೆ. ಭತ್ತ, ಕಬ್ಬು, ಮೆಕ್ಕೆಜೋಳ ಎಲ್ಲವೂ ಒಣಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲಿನಿಂದಲೂ ಎಡವುತ್ತಿದೆ. ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಿದೆ. ಅಲ್ಲಿ ರಾಜ್ಯ ಸರ್ಕಾರ ವಾಸ್ತವ ಹೇಳಬೇಕು. ಸಭೆಯಿಂದ ಹೊರಬರುತ್ತಾರೋ ಎನು ಮಾಡುತ್ತಾರೋ ನೋಡಬೇಕು. ಮುಂದಿನ ವಾರ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಲ್ಳಳಿದೆ. ಅಲ್ಲಿಯೂ ನಮ್ಮ ಸರ್ಕಾರ ಬಲವಾಗಿ ವಾದ ಮಾಡಬೇಕು ಎಂದು ಒತ್ತಾಯಿಸಿದರು.
ಕಾವೇರಿ ಸಂಕಷ್ಟಕ್ಕೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿರುವಾಗ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಲಾಗದು. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಹೇಳುತ್ತಾರೆ. ಅದನ್ನು ಬಿಟ್ಟು ತಮಿಳುನಾಡು ಮುಖ್ಯಮಂತ್ರಿ ಮನವೊಲಿಸಬೇಕು ಎಂದರು.
ನಮ್ಮ ಕಾವೇರಿ ಮಕ್ಕಳ ಹಿತಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಸರ್ಕಾರ ಗಟ್ಟಿಯಾಗಿ ನಿಂತರೆ ನಾವು ಜತೆಗೆ ನಿಲ್ಲುತ್ತೇವೆ ಎಂದು ಬೊಮ್ಮಾಯಿ ಪುನರುಚ್ಚರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 13 =
Remember me
