ಬೆಂಗಳೂರು:ಕರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳ ಶಿಕ್ಷಕರಿಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಒಂದು ಅಥವಾ ಎರಡು ದಿನದ ವೇತನ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಮನವಿ ಮಾಡಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಅವರು ಒಂದು ತಿಂಗಳ ವೇತನ ನೀಡುವುದಾಗಿ ಹೇಳಿದ್ದಾರೆ. ನಾನು ಕೂಡ ನನ್ನ ಪಾಲನ್ನು ನೀಡುತ್ತೇನೆ. ಅದರಂತೆ, ಶಿಕ್ಷಕರು ಉದಾರತೆ ಮೆರೆಯುವ ಮೂಲಕ ಸಮಾಜಕ್ಕೆ ಸಕಾರಾತ್ಮಕ ಸಂದೇಶ ರವಾನಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ಕೋರಿದರು.ಇದನ್ನೂ ಓದಿರಿಸಿಇಟಿಗೂ ಕರೊನಾ ಛಾಯೆ, ಈ ತಿಂಗಳು ಎಕ್ಸಾಂ ನಡೆಯೋದು ಡೌಟು
ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂದು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಇಲಾಖೆಯ ಲಭ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಆಥಿರ್ಕವಾಗಿ ಸಹಕಾರ ನೀಡಲು ಸಾಧ್ಯವಿದೆಯೇ ಎಂದು ಅವಲೋಕಿಸಲಾಗುತ್ತಿದೆ ಎಂದು ಸಚಿವ ಸುರೇಶ್​ ಕುಮಾರ್​ ವಿವರಿಸಿದರು.
ಕಠಿಣ ಪರಿಸ್ಥಿತಿಯಲ್ಲೂ ಸರ್ಕಾರಿ ಮತ್ತು ಅನುದಾನಿತ ಶಿಕ್ಷಕರ ವೇತನ ಬಿಡುಗಡೆಗೆ ವಿಳಂಬ ಮಾಡಿಲ್ಲ. ಆದ್ದರಿಂದ ಶಿಕ್ಷಕರು ಮಾನವೀಯತೆ ಮೆರೆಯುವ ಮೂಲಕ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಬರುವಂತೆ ತಿಳಿಸಿದರು.
ಬಸ್​ ನಿಲ್ದಾಣದಲ್ಲೇ ಕರೊನಾ ಶಂಕಿತನ ಶವ ಬಿಟ್ಟು ಹೋದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 1 =
Remember me
