ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷಬ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಸರ್ಕಾರ ಶುಕ್ರವಾರ ದಿನಾಂಕ ಘೋಷಿಸಲಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಕಾಂಗ್ರೆಸ್​ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಜುಲೈ 16,17,18 ರಂದು ಪ್ರಿಯಾಂಕ ಗಾಂಧಿ ವಾದ್ರಾ ಮೂಲಕ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸರ್ಕಾರ ಯೋಜಿಸಿದೆ. ಅವರು ಒಪ್ಪಿದ ದಿನಾಂಕದಂದು ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಮತ್ತೆ ಮಳೆ ಬಿರುಸು; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಇದಲ್ಲದೆ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರಿ ವ್ಯಾಜ್ಯಗಳ‌ ನಿರ್ವಹಣೆ, ಬಯಲು ಸೀಮೆ ಅಭಿವೃದ್ಧಿ ಮಂಡಳಿ ತಿದ್ದುಪಡಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ತಿದ್ದುಪಡಿ, ಮೈಸೂರು ಲ್ಯಾಂಪ್ಸ್ ವರ್ಕ್ಸ್‌ ಲಿ. ಮೌಲ್ಯಮಾಪನ ವಿಧಾನವನ್ನು ಪರಿಷ್ಕರಿಸಲು ತೀರ್ಮಾನಿಸಲಾಗಿದೆ.
ಕೃಷಿ ಮತ್ತು ತೋಟಗಾರಿಕಾ ಬೆಲೆಗಳ ಸ್ಥಿರೀಕರಣ ಮತ್ತು ಬೆಲೆ ನಿಗದಿ ಮಾಡಲು ಸಚಿವ ಸಂಪುಟ ಉಪಸಮಿತಿ ರಚನೆಗೆ ಅನುಮೋದನೆ. ಆರ್ಟಿಕಲ್ 371ಜೆ ಸಂಬಂಧ ವಿಶೇಷ ಅನುಷ್ಠಾನ ಪ್ತಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚನೆಗೆ ಅನುಮೋದನೆ ನೀಡಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
