ಬೆಂಗಳೂರುಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರು ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿರುವ ಬೆನ್ನಲ್ಲೇ, ಅತಿಥಿ ಉಪನ್ಯಾಸಕರು ಜ.1ರಂದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ಸರ್ಕಾರ ನೀಡಿರುವ ಭರವಸೆಗಳನ್ನು ನಿರಾಕರಿಸಿರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಹೋರಾಟವನ್ನು ಮುಂದುವರಿಸಿದ್ದು, ಜ.1ರಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
ರಾಜ್ಯ ಸರ್ಕಾರವು ನೀಡಿರುವ 5 ಸಾವಿರ ವೇತನ ಹೆಚ್ಚಳ, ಆರೋಗ್ಯ ವಿಮೆ ಮತ್ತು 5 ಲಕ್ಷ ರೂ.ಗಳ ನಿವೃತ್ತಿ ವೇತನ ಹಣದ ಯೋಜನೆಗಳು ನಿಪ್ರ್ಪಯೋಜಕವಾಗಿವೆ. ಇದರ ಬದಲಾಗಿ ಸೇವೆ ಕಾಯಂ ಮಾಡುವುದು ಮತ್ತು ವರ್ಷದ 12 ತಿಂಗಳು ವೇತನ ನೀಡುವ ಯೋಜನೆಯನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ೋಷಿಸಿದ್ದಂತೆ ಜಾರಿಗೊಳಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಜ.1ರಂದು ಪಾದಯಾತ್ರೆಗೆ ಸಿದ್ಧಗಂಗಾ ಮಠದ ಸಿದ್ಧಗಂಗಾ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಪಾದಯಾತ್ರೆಯು ಜ5 ಅಥವಾ 6ರಂದು ಬೆಂಗಳೂರಿಗೆ ತಲುಪಿ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಸಂಘಟನೆಯ ಕಲ್ಮಣಿ ತಿಳಿಸಿದ್ದಾರೆ.
ಸುಪ್ರೀಕೋರ್ಟ್‌ನ ಉಮಾದೇವಿ ಪ್ರಕರಣದ ಮೇಲೆ ದೆಹಲಿಯಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಸಿ ಆೃಂಡ್ ರೂಲ್ಸ್ ಅನ್ನು ತಿದ್ದುಪಡಿ ಮಾಡಿ ಕಾಯಂಗೊಳಿಸಬೇಕು ಎಂದು ಅಂದು ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದರು. ಕೊಟ್ಟ ಮಾತಿನಂತೆ ಈಗ ಕಾಯಂಗೊಳಿಸಬೇಕು.– ಶಿವಪ್ಪ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
