ಬೆಂಗಳೂರು:ರೈತರು ಸಾಂಪ್ರದಾಯಿಕ ಬೆಳೆಗಳೊಂದಿಗೆ ಔಷಧೀಯ ಮತ್ತು ಗಿಡಮೂಲಿಕೆಗಳ ಬೆಳೆಗಳ ಮುಂದುವರಿದ ಕೃಷಿಯನ್ನು ಕೈಗೊಳ್ಳುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ರಾಜ್ಯಪಾಲ ಡಾ. ಥಾವರ್ ಚಂದ್ ಗೆಹಲೋತ್ ಹೇಳಿದ್ದಾರೆ.
ಬೆಂಗಳೂರು ಕೃಷಿ ವಿವಿ ಕ್ಯಾಂಪಸ್ ಜಿಕೆವಿಕೆಯಲ್ಲಿ ಗುರುವಾರ ನಡೆದ ವಿವಿಯ 57ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.
ಕೃಷಿ ಕ್ಷೇತ್ರ ಭಾರತೀಯ ಆರ್ಥಿಕತೆಯ ಮೂಲ ಸ್ತಂಭವಾಗಿದೆ. ಈ ವಲಯದಿಂದ ದೇಶದ ಜಿಡಿಪಿಗೆ ಹೆಚ್ಚಿನ ಕೊಡುಗೆ ಸಂದಾಯವಾಗುತ್ತಿದೆ. ಪ್ರಸ್ತುತ ವಿಶ್ವದಾದ್ಯಂತ ಔಷಧೀಯ ಹಾಗೂ ಸುಗಂಧ ಸಸ್ಯಗಳ ಆಧಾರದ ಮೇಲೆ ವ್ಯಾಪಾರ ವೃದ್ಧಿಯಾಗುತ್ತಿದೆ. ಇದನ್ನು ನಮ್ಮ ರೈತರು ಲಭ್ಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು ಮಾತ್ರವಲ್ಲದೆ ಸಾಂಪ್ರದಾಯಿಕ ಬೆಳೆಗಳೊಂದಿಗೆ ಔಷಧೀಯ, ಗಿಡಮೂಲಿಕೆಗಳ ಬೆಳೆಗಳ ಮುಂದುವರಿದ ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪ್ರತಿಪಾದಿಸಿದ್ಧಾರೆ.
ಈ ವಿಶ್ವವಿದ್ಯಾಲಯದಿಂದ ಪಡೆದ ಜ್ಞಾನವನ್ನು ದೇಶ ಮತ್ತು ಸಮಾಜದ ಹಿತದೃಷ್ಟಿಯಿಂದ ಸಮರ್ಪಿಸಿ ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು. ಪ್ರಸ್ತುತ ದೇಶದಲ್ಲಿ ಕೃಷಿ ಶಿಕ್ಷಣದ ಅವಶ್ಯಕತೆ ಹೆಚ್ಚಾಗಿದ್ದು, ಈ ಶಿಕ್ಷಣ ವ್ಯಕ್ತಿಯ ಏಳಿಗೆಗೆ ಸಹಕಾರಿಯಾಗುವುದರ ಜತೆಗೆ ಸ್ವಯಂ ಉದ್ಯೋಗ ಹಾಗೂ ಉದ್ಯೋಗ ಸೃಷ್ಟಿಗೂ ಸಹಕಾರಿಯಾಗಲಿದೆ.
ಇದನ್ನೂ ಓದಿ:VIDEO| ನೆಟ್ಟಿಗರ ತಲೆಕೆಡಿಸಿದ ಟ್ರಾನ್ಸ್​ಪರೆಂಟ್​ ಮೀನು
ಕೃಷಿ ಅಭಿವೃದ್ಧಿಯಲ್ಲಿ ತೋಟಗಾರಿಕೆ ಕ್ಷೇತ್ರಕ್ಕೆ ವಿಶೇಷ ಸ್ಥಾನವಿದೆ. ತೋಟಗಾರಿಕೆ ಬೆಳೆಗಳ ಪ್ರತಿ ಯೂನಿಟ್ ಪ್ರದೇಶಕ್ಕೆ ಹೆಚ್ಚಿನ ಆದಾಯ, ಉದ್ಯೋಗ ಮತ್ತು ಪೋಷಣೆಯನ್ನು ಒದಗಿಸುವುದರಿಂದ, ಈ ಬೆಳೆಗಳು ವಾಣಿಜ್ಯ ರೂಪವನ್ನು ಪಡೆಯುತ್ತಿವೆ, ಇದರಿಂದಾಗಿ ಈ ಬೆಳೆಗಳ ಉತ್ಪಾದನೆಯತ್ತ ರೈತರ ಒಲವು ಹೆಚ್ಚುತ್ತಿದೆ ಎಂದು ಹೇಳಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಕೊಡುಗೆ ಮತ್ತು ಭಾಗವಹಿಸುವಿಕೆಯಿಂದಾಗಿ ನಮ್ಮ ದೇಶವು ವಿವಿಧ ರೀತಿಯ ಹಣ್ಣು-ತರಕಾರಿಗಳು, ಧಾನ್ಯಗಳು ಇತ್ಯಾದಿಗಳ ಪ್ರಮುಖ ಉತ್ಪಾದಕರಾಗಿ ತನ್ನ ಗುರುತನ್ನು ಸ್ಥಾಪಿಸಿದೆ. ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿಗಾಗಿ, ಕೃಷಿಯನ್ನು ಲಾಭದಾಯಕ ವ್ಯವಹಾರವನ್ನಾಗಿ ಮಾಡಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಇವುಗಳನ್ನು ಸದುಪಯೋಗ ಪಡಿಸಿಕೊಳ್ಳುವತ್ತ ರೈತರು ದೃಷ್ಟಿಹರಿಸಬೇಕಿದೆ ಎಂದು ರಾಜ್ಯಪಾಲರು ವಿವರಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 14 =
Remember me
