ಬೆಂಗಳೂರು:ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತರಿದ್ದರು.
ಇದನ್ನೂ ಓದಿ:ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬರಲಿರುವ VVIPಗಳು ಯಾರು? ಆಹ್ವಾನಿತರ ಪಟ್ಟಿ ಇಂತಿದೆ…
ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಕೂಡಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಾ, ಪಕ್ಷದ ಶಾಸಕರಿಗೆ ಧನ್ಯವಾದ ತಿಳಿಸಿದರು. ಅಧಿಕಾರ ವಹಿಸುತ್ತಿದ್ದಂತೆ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.
ಇದನ್ನೂ ಓದಿ:ಸಿದ್ದರಾಮಯ್ಯ ಸಂಪುಟ ಸೇರಲಿರುವ ಸಚಿವರ ಪಟ್ಟಿ ಇಲ್ಲಿದೆ ನೋಡಿ…
ನನ್ನ ಮೇಲೆ ವಿಶ್ವಾಸ ಇಟ್ಟಿರುವ ಎಲ್ಲರಿಗೂ ಧನ್ಯವಾದಗಳು. ಪ್ರಾಮಾಣಿಕವಾಗಿ ನಂಬಿಕೆ ಉಳಿಸಿಕೊಂಡು, ನೀಡಿರುವ ಭರವಸೆ ಈಡೇರಿಸುತ್ತೇನೆ. ಇದಕ್ಕೆ ಎಲ್ಲರೂ ಸಹಕಾರ ಕೊಡಿ ಎಂದು ಸಿದ್ದರಾಮಯ್ಯ ಶಾಸಕರಿಗೆ ಮನವಿ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
