ಬೆಂಗಳೂರು:ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಟಿ. ಜೆ. ಅಬ್ರಹಾಂ ಅವರು ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ಸಿಎಂ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆಗಳನ್ನು ನೀಡಿದ್ದಾರೆ.
ಇದನ್ನೂ ಓದಿ:ಕುಮಾರಸ್ವಾಮಿ ಯು ಟರ್ನ್ ಹೇಳಿಕೆಗಳ ಮೊದಲು ಮಂಡ್ಯದಲ್ಲಿ ಉತ್ತರ ನೀಡಲಿ: ಡಿಕೆ ಶಿವಕುಮಾರ್
ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ ಆದ ಬೆನ್ನಲ್ಲೇ ಅಬ್ರಾಹಂ ಭೇಟಿ ಮಾಡಿ ಪ್ರಕರಣ ಸಂಬಂಧ ಮತ್ತಷ್ಟು ವಿವರಣೆ ನೀಡಿದ್ದಾರೆ. ಇನ್ನು ರಾಜ್ಯಪಾಲರನ್ನು ಭೇಟಿ ಮಾಡಿ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ, ನನ್ನ ಬಳಿ ಮತ್ತಷ್ಟು ಕ್ಲಾರಿಪಿಕೇಷನ್ ಕೇಳಿದ್ದಾರೆ. ಕಳೆದ ಬಾರಿ ಕೇಳಿದ ದಾಖಲೆಗಳ ಬಗ್ಗೆ ಮತ್ತೆ ಮಾತಾಡಿದ್ದು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟೇ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನನ್ನ ಬೇಡಿಕೆ ಏನಿತ್ತೋ ಅದರ ಮೇರೆಗೆ ಸರ್ಕಾರಕ್ಕೆ ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದರು. ಆದರೆ ಸಚಿವ ಸಂಪುಟ ಸಿಎಂ ತಪ್ಪಿಲ್ಲ, ರಾಜ್ಯಪಾಲರು ನೋಟಿಸ್ ಕೊಟ್ಟಿರೋದೇ ತಪ್ಪು ಅಂತ ನಿರ್ಣಯ ಮಾಡಿದೆ. ಅಬ್ರಹಾಂ ಸರಿಯಿಲ್ಲ ಅಂತಲೂ ಸರ್ಕಾರ ಆಪಾದನೆ ಮಾಡಿದೆ. ಹೀಗಾಗಿ ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.
ಸರ್ಕಾರ ನನ್ನ ಮೇಲೆ ಮಾಡಿರುವ ಆರೋಪ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ನನಗೆ ತಿಳಿದ ಮಟ್ಟಿಗೆ ರಾಜ್ಯಪಾಲರು ಸಿಎಂಗೆ ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ ಎಂದರೆ ಅವರಿಗೆ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಇದೆ ಎಂದರ್ಥ. ಕಳೆದ ಗುರುವಾರ ರಾಜ್ಯಪಾಲರ ಸಮಯ ಕೇಳಿದ್ದೆ, ಇವತ್ತು ಬರಲು ಹೇಳಿದ್ದರು, ಬಂದು ಸ್ಪಷ್ಟೀಕರಣ ಕೊಟ್ಟಿದ್ದೇನೆ ಎಂದರು.
ನನ್ನ ವಿರುದ್ಧ ಯಾವ ದೂರೂ ಇಲ್ಲ. ಸರ್ಕಾರಕ್ಕೆ ನಾನು ನೇರ ಸವಾಲ್ ಹಾಕುತ್ತೇನೆ. ನನ್ನ ವಿರುದ್ಧ ಕೇಸ್ ಹುಡುಕಿ, ಹುಡುಕಲು ಆಗದಿದ್ದರೆ ಹೇಗೆ ಹುಡುಕಬೇಕು ಅಂತ ನನ್ನ ಕೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡು ಪೊಲೀಸ್ ಠಾಣೆ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 1 =
Remember me
