ಬೆಂಗಳೂರು:ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಆಧ್ಯಾದೇಶವನ್ನು ಮಾಡಲು ಸಚಿವ ಸಂಪುಟ ತೀರ್ಮಾನಿಸಿದ್ದು, ಇಂದು ಅದಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ 15ರಿಂದ 17ಕ್ಕೆ ಏರಲಿದ್ದು, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ. 3ರಿಂದ 7ಕ್ಕೆ ಏರಲಿದೆ.
ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ಧತೆಯಿಂದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನತೆವೆತ್ತ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಯಾದೇಶಕ್ಕೆ ವಿಧಾನಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೀಪಾವಳಿ ಸಂದರ್ಭ ಬೈಗುಳಕ್ಕೆ ಒಳಗಾಗ್ತಿದ್ದ ಕೊಹ್ಲಿಗೆ ಈ ಬಾರಿ ಭರ್ಜರಿ ಪ್ರಶಂಸೆ; ಬೈದವರೇ ಹೊಗಳುತ್ತಿದ್ದಾರೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
