ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ.
ಇದನ್ನೂ ಓದಿ:ಮುಂಬೈನ ಹಲವೆಡೆ 20.ಸೆಂ.ಮೀ ಮಳೆ ದಾಖಲು: ವರುಣನ ಹೊಡೆತಕ್ಕೆ ಜನರು ತತ್ತರ…!
ಈ ಕುರಿತು ಸಮಗ್ರ ವರದಿ ನೀಡುವಂತೆ ರಾಜ್ಯ ಭವನವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್‌ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ, ಬೆಲೆಬಾಳುವ 14 ನಿವೇಶನಗಳನ್ನು ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ, ಜೆಡಿಎಸ್​ ಪಕ್ಷಗಳು ಗಂಭೀರ ಆರೋಪ ಮಾಡಿತ್ತಿವೆ.

ನಿಯಮದ ಪ್ರಕಾರವೇ ಎಲ್ಲರಿಗೂ ಸೈಟ್ ಹಂಚಿಕೆಯಾಗುವಂತೆ ಮುಡಾದಿಂದ ಸೈಟ್ ಹಂಚಿಕೆಯಾಗಿವೆ. ನಾವು ಯಾವುದೇ ತಪ್ಪು ಮಾಡಿಲ್ಲ.ಯಾವುದೇ ಅಕ್ರಮ ನಡೆದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿದ್ದಾರೆ.
ಏನಿದು ಆರೋಪ?:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.
ಈ ವಿಚಾರವಾಗಿ ನಗರಾಭಿವೃದ್ಧಿ ಇಲಾಖೆಗೆಗೆ ಕಳೆದ ಒಂದು ವರ್ಷದಿಂದ 15 ಪತ್ರಗಳನ್ನು ಬರೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು 50- 50 ಅನುಪಾತವನ್ನು ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಜೊತೆಗೆ ತನಿಖಾ ಸಮಿತಿ ರಚಿಸಿ ಮುಡಾ ಆಯಕ್ತರ ವಿಚಾರಣೆ ಮಾಡುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದರೆ ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಶಾಶ್ವತ ನೀರಾವರಿ ಯೋಜನೆ: ಸಂಸದ ಕೆ. ಸುಧಾಕರ್‌ ಆಗ್ರಹ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 + 14 =
Remember me
