ಬೆಂಗಳೂರು:ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡುವುದು ಸಲ್ಲದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿದ ಅವರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಮೇಲಿನ ತನಿಖೆಗೆ ಅನುಮತಿ ನೀಡಬೇಕು ಎಂದು ಲೋಕಾಯುಕ್ತದವರು 2023ರ ನವೆಂಬರ್‌ನಲ್ಲಿ ಮಾಡಿದ ಮನವಿಗೆ ರಾಜ್ಯಪಾಲರು ಸ್ಪಂದಿಸಿಲ್ಲ. ಇದರಿಂದಾಗಿ ಮತ್ತೊಮ್ಮೆ ಲೋಕಾಯುಕ್ತದವರು ಮನವಿ ಮಾಡಿರಬಹುದು ಎಂದರು.
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ  ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023 ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ,ಲೋಕಾಯುಕ್ತ ಮತ್ತೊಮ್ಮೆ ಕೋರಿದ್ದಾರೆ.
ಆದರೆ 26-07-2024 ರಂದು ಅಬ್ರಾಹಂ ರವರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ  ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಸ್ಪಂದಿಸಿ, ಕಾರಣ ಕೇಳಿ ನೋಟಿಸ್ ನೀಡಿದರು. ಉತ್ತರ ನೀಡಿದ ನಂತರವೂ ಪ್ರಾಸಿಕ್ಯೂಷನ್ ಗೆ ಅನುಮತಿ  ನೀಡಿದ್ದು, ಇಂತಹ ತಾರತಮ್ಯವೇಕೆ ? ಎಂದು ಪ್ರಶ್ನಿಸಿದರು.
ರಾಜ್ಯಪಾಲರನ್ನು ಕಾಂಗ್ರೆಸ್ ನವರು ಹೀಯಾಳಿಸಿದ್ದಾರೆ ಎಂಬ ಬಿಜೆಪಿಯವರ ಆರೋಪವೇ ಸರಿಯಿಲ್ಲ. ಶಶಿಕಲಾ ಜೊಲ್ಲೆ , ಹೆಚ್.ಡಿ. ಕುಮಾರಸ್ವಾಮಿ , ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿನವರ ಮೇಲೆ ಆರೋಪಗಳಿವೆ. ಇದುವರೆಗೆ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿಲ್ಲ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾಗಿದೆ. ಅವರ ಮೇಲೆ ಗೌರವವಿದೆ. ಆದರೆ ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸಬಾರದು  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
