ಬೆಂಗಳೂರು:ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಕೋಟ್ಯಂತರ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಚೈತ್ರಾ ಕುಂದಾಪುರ ಮತ್ತವರ ತಂಡ ಬಂಧನಕ್ಕೆ ಒಳಗಾಗಿರುವ ಪ್ರಕರಣದ ಕುರಿತು ಇಂದು ಮಹತ್ವದ ಬೆಳವಣಿಗೆ ನಡೆದಿದೆ.
ಈ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿ ವಿರುದ್ಧವೂ ಆರೋಪ ಕೇಳಿಬಂದಿದ್ದು, ಬಂಧನದ ಭೀತಿ ಎದುರಿಸುತ್ತಿರುವ ಅವರು ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಕಾಲಾವಕಾಶ ಕೇಳಿದೆ. ಆದರೆ ಹೀಗೆ ಕಾಲಾವಕಾಶ ಕೇಳಿ ಕಾಲಹರಣ ಮಾಡಲಾಗುತ್ತಿದೆ ಎಂದು ಹಾಲಶ್ರೀ ಪರ ವಕೀಲ ಅರುಣ್ ಶ್ಯಾಂ ಹೇಳಿದ್ದಾರೆ.
ಇದನ್ನೂ ಓದಿ:ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಹೇಗೆ ಸಂಬಂಧ?: ಇಲ್ಲಿದೆ ಕಾಂಗ್ರೆಸ್​ ವಿವರಣೆ
ಅಭಿನವ ಹಾಲಶ್ರೀ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ವಕೀಲ ಅರುಣ್ ಶ್ಯಾಂ ಇಂದು ಹೈಕೋರ್ಟ್​ನಲ್ಲಿ ವಾದ ಮಂಡಿಸಿದ್ದಾರೆ. ಗೋವಿಂದಬಾಬು ಪೂಜಾರಿ ಆರು ತಿಂಗಳ ಹಿಂದೆಯೇ ದೂರು ನೀಡಬೇಕಿತ್ತು, ಆದರೆ 6 ತಿಂಗಳ ಬಳಿಕ ದೂರು ನೀಡಿದ್ದಾರೆ. ಅಲ್ಲದೆ ಗೋವಿಂದಬಾಬು ಪೂಜಾರಿ ಮೇಲೆ ಇಂದಿರಾ ಕ್ಯಾಂಟೀನ್ ವಿಚಾರದಲ್ಲಿ ಮೋಸದ ಆರೋಪವಿದೆ. ಅವರ ಮೇಲೇ ಆರೋಪ ಇರುವುದರಿಂದ ಅವರು ನೀಡಿದ ದೂರಿನ ಮೇಲೆ ಅನುಮಾನವಿದೆ ಎಂದು ಅರುಣ್​ ಶ್ಯಾಂ ವಾದಿಸಿದ್ದು, ಅರ್ಜಿ ವಿಚಾರಣೆ ಸೆ. 19ಕ್ಕೆ ಮುಂದೂಡಲಾಗಿದೆ.
ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

ಕೋವಿಡ್​ಗಿಂತಲೂ ಮಾರಕ ಈ ನಿಫಾ ವೈರಸ್: ಮರಣ ಪ್ರಮಾಣ ಅಧಿಕ ಎಂದ ಐಸಿಎಂಆರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
