ಬೆಂಗಳೂರು: ಕರೊನಾ ನಿಯಂತ್ರಣಕ್ಕೆ ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಇದೀಗ ಆರ್ಥಿಕ ಮಿತವ್ಯಯದ ನೆಪದಲ್ಲಿ ಎಲ್ಲ ಇಲಾಖೆಗಳ ನೇಮಕ ಪ್ರಕ್ರಿಯೆಗಳನ್ನು ತಡೆ ಹಿಡಿದಿದೆ. ಹಣಕಾಸು ಇಲಾಖೆ ಈ ಸಂಬಂಧ ಸೋಮವಾರ ಆದೇಶ ಹೊರಡಿಸಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಈ ತೀರ್ಮಾನ ನಿರಾಸೆ ಮೂಡಿಸಿದೆ.
ರಾಜ್ಯದಲ್ಲಿ ಕರೊನಾ ಪರಿಸ್ಥಿತಿಯನ್ನು ನಿಭಾಯಿಸಿ, ಆರ್ಥಿಕ ಸ್ಥಿತಿಯನ್ನು ಹಳಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೋಡೀ ಕರಿಸುವುದು ಅಗತ್ಯ. ಇದಕ್ಕಾಗಿ ಸರ್ಕಾರ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್​ಲಾಗ್ ಹುದ್ದೆಗಳೂ ಸೇರಿ ಎಲ್ಲ ನೇರ ನೇಮಕ ಹುದ್ದೆಗಳ ಭರ್ತಿಗೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆ ಸ್ಪಷ್ಟಪಡಿಸಿದೆ.
ಈಗಾಗಲೇ ಆರ್ಥಿಕ ಇಲಾಖೆ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ. ಮುಖ್ಯಮಂತ್ರಿಯವರಿಂದಲೇ ಈ ತೀರ್ಮಾನ ಅನುಮೋದಿಸಿ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ತೀರ್ವನದ ಪರಿಣಾಮ:ಸಿಬ್ಬಂದಿ ಕೊರತೆಯಿಂದ ಬಳಲುತ್ತಿರುವ ಇಲಾಖೆಗಳ ಮೇಲೆ ಮತ್ತಷ್ಟು ಹೊರೆ ನಿವೃತ್ತಿಯಾಗುವವರಿಂದ ಇನ್ನಷ್ಟು ಹುದ್ದೆಗಳು ಖಾಲಿ ಬೀಳಲಿವೆ ನೇಮಕ ಆದೇಶಪತ್ರ ಪಡೆದುಕೊಳ್ಳಲಷ್ಟೇ ಬಾಕಿ ಇರುವವರಿಗೂ ಕಹಿಸುದ್ದಿ ವಯೋಮಿತಿ ಮೀರುತ್ತಿರುವವರಿಗೆ ಇನ್ನಷ್ಟು ಆತಂಕ ಹೆಚ್ಚಾಗಲಿದೆ ಪರಿಸ್ಥಿತಿ ಸುಧಾರಿಸು ವವರೆಗೂ ಆಕಾಂಕ್ಷಿಗಳು ಸರ್ಕಾರಿ ಕೆಲಸದ ಮೇಲೆ ಆಸೆ ಇಟ್ಟುಕೊಳ್ಳುವಂತಿಲ್ಲ.
ಮಾಂಸ ತಿನ್ನಬೇಡಿ; ಬಂದಿದೆ ಮತ್ತೊಂದು ಮಹಾಮಾರಿ; ಚಿಕಿತ್ಸೆ ಲಭಿಸದಿದ್ದಲ್ಲಿ 24 ತಾಸಿನಲ್ಲಿ ಸಾವು; ಚೀನಾ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 2 =
Remember me
