ತುಮಕೂರು:ಕೋಡಿಹಳ್ಳಿ ಚಂದ್ರಶೇಖರ್ ಚೈನಾ ಮಾಡೆಲ್. ಆತ ಉತ್ತರ ಕೊರಿಯಾ, ಚೀನಾದಿಂದ ಬಂದು ಸಾರಿಗೆ ನೌಕರರ ಜತೆ ಹೋರಾಟಕ್ಕೆ ಸೇರಿಕೊಂಡಿದ್ದಾನೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡುಶಿವಣ್ಣ ಲೇವಡಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೊಗಡು ಶಿವಣ್ಣ, ಕರೊನಾ ಸಂದರ್ಭದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾಗ ಅವರ ಬೆಂಬಲಕ್ಕೆ ನಿಲ್ಲದ ಈ ಕೋಡಿಹಳ್ಳಿ, ರಾತ್ರೋರಾತ್ರಿ ಉದ್ಭವಿಸಿ ಸಾರಿಗೆ ನೌಕರರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಈತನಿಗೆ ಕಾಣಿಸುತ್ತಿಲ್ಲವೇ? ನೌಕರರ ಪರ ಹೋರಾಟ ಮಾಡಲು ಈತ ಯಾರು? ಎಂದು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡರು.
ಹತ್ತುಬೇಡಿಕೆಗಳಲ್ಲಿ ಒಂಭತ್ತು ಬೇಡಿಕೆ ಈಡೇರಿಸಲಾಗಿದೆ. ಆದರೂ, ನೌಕರರು ಈ ರೀತಿ ಪಟ್ಟುಹಿಡಿದಿರುವುದು ಸರಿಯಲ್ಲ. ಕೋಡಿಹಳ್ಳಿ ರೈತಾಪಿಗಳ ಪರ ಹೋರಾಟ ಮತ್ತು ಬೆಂಬಲಕ್ಕೆ ನಿಲ್ಲುವುದನ್ನು ಬಿಟ್ಟು ಸಾರಿಗೆ ನೌಕರರ ಹೋರಾಟಕ್ಕೆ ಇಳಿದಿರುವುದರಲ್ಲಿ ಅರ್ಥವಿಲ್ಲ. ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಕೋಡಿಹಳ್ಳಿಯನ್ನು ಮೊದಲು ಬಂಧಿಸಬೇಕು ಎಂದು ಸೊಗಡುಶಿವಣ್ಣ ಒತ್ತಾಯಿಸಿದರು.
ಸಾರಿಗೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ನಿನ್ನೆ ಒಪ್ಪಿಕೊಂಡಿತ್ತು. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಮತ್ತೆ ಹಠ ಹಿಡಿದಿರುವ ಕಾರಣ ಪ್ರತಿಭಟನೆ ಮುಂದುವರಿಸಿರುವುದು ಸರಿಯಲ್ಲ ಎಂದರು.
ಸಾರಿಗೆ ಮುಷ್ಕರದ ಕಿರಿಕಿರಿ ನಡುವೆಯೂ ಸಚಿವ ಸ್ಥಾನಕ್ಕೆ ಲಾಬಿ

https://www.vijayavani.net/love-case-suicide/
ಸರ್ಕಾರಕ್ಕೆ ಸೆಡ್ಡು ಹೊಡೆದ ಸಾರಿಗೆ ಸಿಬ್ಬಂದಿ: ಮತ್ತೆ ಬಸ್​ ಬಂದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
