ಬೆಂಗಳೂರುಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಸಿರುವ ರಾಜ್ಯ ಸರ್ಕಾರವು ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂದು ಗುರುತಿಸಲು ನಿಗದಿಪಡಿಸಿದ್ದ ಅಲ್ಪಸಂಖ್ಯಾತ ಸಮುದಾಯದ ಕನಿಷ್ಠ ಸಂಖ್ಯೆಯ ವಿದ್ಯಾರ್ಥಿಗಳ ದಾಖಲಾತಿ ಮಾನದಂಡದ ಷರತ್ತನ್ನು ರದ್ದುಪಡಿಸಿದೆ.
ರಾಜ್ಯದಲ್ಲಿ ಮತೀಯ ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಸಂಸ್ಥೆಗಳೆಂದು ೋಷಿಸಲು ಇರುವ ನಿಯಮ/ಆದೇಶಗಳಲ್ಲಿ ಅಲ್ಪಸಂಖ್ಯಾತ ಶೈಕ್ಷಣಿಕ ಸಂಸ್ಥೆಗಳ ರಾಷ್ಟ್ರೀಯ ಆಯೋಗದ ಮಾರ್ಗಸೂಚಿಗೆ ಒಳಪಟ್ಟು ಶೈಕ್ಷಣಿಕ ಸಂಸ್ಥೆಗಳು ಆಯಾ ಶೈಕ್ಷಣಿಕ ವರ್ಷದಲ್ಲಿ ಕಡ್ಡಾಯವಾಗಿ ಇಂತಿಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಹೊಂದಿರಬೇಕು ಎಂಬ ಷರತ್ತನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.
ಮಾ.12ರಂದು ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಮಾ.16 ರಂದು ಆದೇಶವನ್ನು ಹೊರಡಿಸಿದೆ. ಪರಿಣಾಮ, ಅಲ್ಪಸಂಖ್ಯಾತ ಸಂಸ್ಥೆಗಳು ಸರ್ಕಾರದಿಂದ ಸವಲತ್ತುಗಳನ್ನು ಪಡೆದು ತಮಗೆ ಬೇಕಾದಂತೆ ನಿಯಮ ರೂಪಿಸಿಕೊಳ್ಳಲು ಇದರಿಂದ ಅನುಕೂಲವಾಗಲಿದೆ.
– ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ತಮಗೆ ಬೇಕಾದಂತೆ ನಿಯಮ ರೂಪಿಸಿಕೊಂಡು ತಮಗೆ ಬೇಕಾದವರಿಗೆ ಸೀಟುಗಳನ್ನು ನೀಡಬಹುದು.
– ಅರ್ಹರಿಗೆ ನ್ಯಾಯ ಸಿಗದ ಸಮಯದಲ್ಲಿ ನ್ಯಾಯಾಲಯದ ಮೊರೆ ಹೋಗಲು ವಿದ್ಯಾರ್ಥಿಗಳಿಗೆ ಕಾನೂನು ಇಲ್ಲವಾಗಬಹುದು
– ಆದೇಶದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ಸಹ ಸೇರಿಸಿರುವ ಕಾರಣ, ಇಂಜಿನಿಯರಿಂಗ್ ಸೇರಿ ಇನ್ನಿತರ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯಲ್ಲಿ ಅರ್ಹರಿಗೆ ಅನ್ಯಾಯವಾಗಬಹುದು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 4 =
Remember me
