ಬೆಂಗಳೂರು: ರಾಜ್ಯದ 21 ಜಿಲ್ಲೆಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ (ಎಎಸ್‌ಪಿ) ಹುದ್ದೆಗಳನ್ನು ಸೃಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಇಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ನಿರ್ದೇಶನದಂತೆ ಕರ್ತವ್ಯ ನಿರ್ವಹಿಸುತ್ತಾರೆ.21 ಜಿಲ್ಲಾ ಪೊಲೀಸ್ ಘಟಕಗಳಲ್ಲಿ 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಎಂದು ವಿಂಗಡಿಸಿ ಈ ಇಬ್ಬರಿಗೂ ಕರ್ತವ್ಯ ಹಂಚಿಕೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಅವರಿಗೆ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯ ಜವಬ್ಧಾರಿ ವಹಿಸಿದರೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಅವರಿಗೆ ಅಪರಾಧ ಮತ್ತು ನ್ಯಾಯಾಲಯಗಳ ವಿಚಾರಣೆ ಮತ್ತು ನಿರ್ವಹಣೆಯ ಜವಬ್ಧಾರಿಯನ್ನು ವಹಿಸಲಾಗಿದೆ.ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಕರ್ತವ್ಯ:ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ಸಂಚಾರಕ್ಕೆ ಸಂಬಂಧಿಸಿದ ಎಲ್ಲಾ ಕರ್ತವ್ಯಗಳು ಸೇರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸುವುದು.ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಕರ್ತವ್ಯ:ಜಿಲ್ಲೆಯಲ್ಲಿ ಅಪರಾಧ, ನ್ಯಾಯಾಲಯಗಳ ವಿಚಾರಣೆ ನಿರ್ವಹಣೆ, ಡಿಎಆರ್ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಗೆ ಸಂಬಂಧಿಸಿದ ವಿವಿಧ ಕರ್ತವ್ಯ ನಿರ್ವಹಣೆ ಸೇರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸುವುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 4 =
Remember me
