ಬೆಂಗಳೂರು:ಕರೊನಾದಿಂದಾಗಿ ಬಾಗಿಲು ಮುಚ್ಚಿರುವ ರಾಜ್ಯದ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಶಿಕ್ಷಣ ಇಲಾಖೆ ಸೇರಿದಂತೆ 8 ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಈಗಾಗಲೇ ಶಿಕ್ಷಣ ಇಲಾಖೆ ವಿವಿಧ ಇಲಾಖೆಗಳು ಮತ್ತು ತಜ್ಞರ ಜತೆಗೆ ಸಭೆ ನಡೆಸಿ ಶಿಕ್ಷಣ ಸಚಿವರಿಗೆ ನೀಡಿರುವ ವರದಿಯಲ್ಲಿ ಡಿಸೆಂಬರ್ ಮೊದಲನೇ ವಾರದಲ್ಲಿ 9 ರಿಂದ 12ನೇ ತರಗತಿ ಆರಂಭಿಸಬಹುದೆಂದು ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಭೆ ಮಹತ್ವ ಪಡೆದುಕೊಂಡಿದೆ. ಮಧ್ಯಾಹ್ನ 12ಕ್ಕೆ ಸಭೆ ಆರಂಭವಾಗಲಿದೆ.
ಯಾರ್ಯಾರು ಭಾಗಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.
ವರದಿಯ ಪ್ರಾತ್ಯಕ್ಷಿಕೆ:ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಅವರು ಶಾಲೆ ಆರಂಭಿಸುವ ಬಗ್ಗೆ ಪಾಲಕರು, ಶಾಲಾ ಆಡಳಿತ ಮಂಡಳಿ ಸೇರಿದಂತೆ ಎಲ್ಲರೊಂದಿಗೆ ಸಭೆ ನಡೆಸಿ ಸಿದ್ಧಪಡಿಸಿರುವ ವರದಿಯನ್ನು ಸಚಿವ ಎಸ್. ಸುರೇಶ್ ಕುಮಾರ್ ಮೂಲಕ ಸಿಎಂಗೆ ಸಲ್ಲಿಸಲಿದ್ದಾರೆ. ಬಳಿಕ ವರದಿ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಆಯುಕ್ತರ ವರದಿ, ವಿವಿಧ ಇಲಾಖೆಗಳ ಅಭಿಪ್ರಾಯ ಪಡೆದ ಬಳಿಕ ಮುಖ್ಯಮಂತ್ರಿಗಳು ಎಂದಿನಿಂದ ಶಾಲೆ ಮತ್ತು ಪಿಯು ಕಾಲೇಜು ಆರಂಭಿಸಬೇಕೆಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ನಿರಂಜನಾರಾಧ್ಯ ಪತ್ರ:ಶಾಲೆ ಆರಂಭಿಸದೇ ಇರಲು ಯಾವುದೇ ವೈಜ್ಞಾನಿಕ ಕಾರಣ ಇಲ್ಲ. ಹೀಗಾಗಿ ಸೋಮವಾರದ ಸಭೆಯಲ್ಲಿ ಶಾಲೆ ಆರಂಭಿಸುವ ನಿರ್ಧಾರ ತೆಗೆದುಕೊಳ್ಳಬೇಕೆಂದು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ವರದಿಯಲ್ಲೇನಿತ್ತು?:ಶಿಕ್ಷಣ ಇಲಾಖೆ ಆಯುಕ್ತರು ನ.9ರಂದು ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು. ನ.17ರಿಂದ ಪದವಿ ಕಾಲೇಜುಗಳು ಆರಂಭವಾದ ಬಳಿಕ ಹಾಗೂ ದೀಪಾವಳಿ ನಂತರದ ಕರೊನಾ ಪರಿಣಾಮವನ್ನು ಅವಲೋಕಿಸಿಕೊಂಡು ಮೊದಲ ಹಂತದಲ್ಲಿ ನವೆಂಬರ್ ಅಂತ್ಯ ಅಥವಾ ಡಿಸೆಂಬರ್​ನಿಂದ 9ರಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಬಹುದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸಮಸ್ಯೆ ಪರಿಗಣಿಸಿ
ಶಾಲೆ ಆರಂಭಿಸುವುದಾದರೆ, ಸುರಕ್ಷತಾ ಕ್ರಮ ಅನುಸರಿಸಲು ಅವಶ್ಯವಾದ ಉಪಕರಣ ಖರೀದಿಗೆ ಸರ್ಕಾರ ರಿಯಾಯಿತಿ ನೀಡಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕರೊನಾ ಬಂದರೆ ಸರ್ಕಾರವೇ ವೆಚ್ಚ ಭರಿಸಬೇಕೆಂಬ ಹಲವು ಬೇಡಿಕೆಗಳನ್ನು ಸಿಎಂ ಪರಿಗಣಿಸಬೇಕೆಂದು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್್ಸ) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − thirteen =
Remember me
