ಬೆಂಗಳೂರು:ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರಾಜ್ಯಪಾಲರಿಗೆ ಬರೆದಿದ್ದ ಪತ್ರ ನಕಲಿ ಎಂದು ಹೇಳಲಾಗಿದ್ದು, ಏಳು ಜನರ ಸಹಿಯನ್ನು ಒಬ್ಬರೇ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿರುವುದರಿಂದ ಸಿಐಡಿಗೆ ಕೊಡಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ಹೇಳುತ್ತವೆ.
ಪತ್ರದಲ್ಲಿ ಜನತಾದಳದ ಹಾಗೂ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಇರುವುದರಿಂದ ಹೆಚ್ಚಿನ ತನಿಖೆಯ ಅಗತ್ಯ ಇದೆ ಎಂದು ಮೂಲಗಳು ಹೇಳುತ್ತವೆ. ಮಂಡ್ಯದಲ್ಲಿ ದೂರು ದಾಖಲಾಗಿದ್ದು ಎಫ್ಐಆರ್ ಮಾಡಲಾಗಿದೆ.
ಚಲುವರಾಯಸ್ವಾಮಿ ವಿರುದ್ಧ ಲಂಚಕ್ಕಾಗಿ ಒತ್ತಡ ಆರೋಪ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಶಾಸಕರೇ ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ದೂರಿನ ಪತ್ರ ಕಳುಹಿಸಿದ್ರಾ ಎಂಬ ಅನುಮಾನ ವ್ಯಕ್ತವಾಗಿದೆ. ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ಶಾಸಕರು ಗಂಭೀರ ಆರೋಪ ಮಾಡಿದ್ದಾರೆ. ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಮಾಡಿ ದೂರು ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಚಲುವರಾಯಸ್ವಾಮಿ ಪರ ನಿಲ್ಲುವ ಜೊತೆಗೆ ದಳಪತಿಗಳ ವಿರುದ್ಧ ಕಾಂಗ್ರೆಸ್​ ಶಾಸಕರು ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರಿಗೆ ನೀಡಿರುವ ದೂರಿನ ಪತ್ರದ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ:ಶ್ರೀರಾಂಪುರದ ಹರಿಶ್ಚಂದ್ರ ಘಾಟ್​​ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರಕ್ಕೆ ಕುಟುಂಬಸ್ಥರ ನಿರ್ಧಾರ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಂಟಿ ಕೃಷಿ ನಿರ್ದೇಶಕ ಅಶೋಕ್ ಅವರು ಮಂಡ್ಯ ಎಸ್ಪಿಗೆ ದೂರು ಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಸಹಾಯಕ ಕೃಷಿ ನಿರ್ದೇಶಕರು ದೂರು ನೀಡಿಲ್ಲ. ಆ ಸಂಬಂಧ ನಾನೇ ಖುದ್ದಾಗಿ ವಿಚಾರಿಸಿದ್ದೇನೆ. ಸಚಿವರಾಗಲಿ, ಅಧಿಕಾರಿಗಳಾಗಲಿ ಯಾರು ಹಣಕ್ಕೆ ಬೇಡಿಕೆ ಇಟ್ಟಿಲ್ಲ. ದೂರು ಪ್ರತಿಯಲ್ಲಿನ ಸಹಿಯು‌ ಕೂಡ ನಮ್ಮದಲ್ಲ ಎಂದು ಹೇಳಿದ್ದಾರೆ. ದುರುದ್ದೇಶದಿಂದ ನಮ್ಮ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು ಸಲ್ಲಿಸಿರುವ ಸಾಧ್ಯತೆ ಇದೆ. ಆದ್ದರಿಂದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಚಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಕಾಂಗ್ರೆಸ್​ನಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಇದು ಸಚಿವರ ವಿರುದ್ಧ ನಡೆದಿರುವ ಷಡ್ಯಂತ್ರ ಎಂದು ಆರೋಪ ಮಾಡಿದ್ದಾರೆ. ರಾಜ್ಯಪಾಲರಿಗೆ ಕೃಷಿ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು ನೀಡಲಾಗಿದೆ. ಕೃಷಿ ಅಧಿಕಾರಿಗಳ ಸಹಿಯನ್ನು ನಕಲಿ ಮಾಡಿದ್ದಾರೆ. ನಕಲಿ ದೂರು ಪತ್ರ ಸಲ್ಲಿಸಿದವರನ್ನು ಪತ್ತೆ ಹಚ್ಚಬೇಕು. ಕಿಡಿಗೇಡಿಗಳ ಮೇಲೆ ಕ್ರಮ ಜರುಗಿಸಬೇಕು. ಇಷ್ಟೇ ಅಲ್ಲದೆ, ನಕಲಿ ದೂರದಾರರಿಗೆ ಬೆಂಬಲ ಕೊಟ್ಟ ಪಕ್ಷದ ವಿರುದ್ಧವು ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದು, ಮಂಡ್ಯದ ಸಂಜಯ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ‌‌ ನಡೆಸುತ್ತಿದ್ದಾರೆ.
ನಟ ಯೋಗಿ ಬಾಬು ಜತೆ ಹ್ಯಾಂಡ್​ ಶೇಕ್​ ಮಾಡಲು ನಿರಾಕರಿಸಿದ ಪೂಜಾರಿ: ವಿವಾದ ಹುಟ್ಟುಹಾಕಿದ ವೈರಲ್​ ವಿಡಿಯೋ

ಇಂದು ಸಂಜೆ ಅಥವಾ ತಡರಾತ್ರಿ ಸ್ಪಂದನಾ ಪಾರ್ಥೀವ ಶರೀರ ಬೆಂಗ್ಳೂರು ತಲುಪುವ ಸಾಧ್ಯತೆ: ನಾಳೆ ಅಂತ್ಯಕ್ರಿಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
