ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಒಂದು ವಾರದೊಳಗೆ ಈಡೇರಿಸದಿದ್ದರೆ ಹಂತ ಹಂತವಾಗಿ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಆರೋಗ್ಯ ಇಲಾಖೆಯ 4,968 ವೈದ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಗುತ್ತಿಗೆ ವೈದ್ಯರು ಹಾಗೂ ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರ ನಡೆಸಿದ್ದರು. ಸರ್ಕಾರ ಅವರ ಬೇಡಿಕೆ ಈಡೇರಿಸಿತ್ತು. ಇದೇ ವೇಳೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಪತ್ರ ಸಲ್ಲಿಸಿ, ಬೇಡಿಕೆಗಳನ್ನು ಈಡೇರಿಸಲು ಕೋರಿತ್ತು.
ಇದನ್ನೂ ಓದಿ:ಹಾಲಿನವನಿಗಾಗಿ ಕಾಯುತ್ತಿದ್ದ 90ರ ವೃದ್ಧೆಯನ್ನು ಹೊಲಕ್ಕೆ ಕರೆದುಕೊಂಡು ಹೋಗಿ ರೇಪ್​ ಮಾಡಿದ ಕ್ರೂರಿ
ನಂತರ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಳಿಕ ವೈದ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯಿಸಿದ್ದರು. ಆಗ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಈವರೆಗೂ ಕ್ರಮ ಕೈಗೊಳ್ಳದಿರುವುದರಿಂದ ಮುಂದಿನ ವಾರದಿಂದ ವೈದ್ಯರು ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಸೇವೆ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ.
ಪಟಾಕಿ ಸಿಡಿಸೋದು ದೀಪಾವಳಿ ಹಬ್ಬದ ಅವಿಭಾಜ್ಯ ಅಂಗ: ನ್ಯಾಯಮೂರ್ತಿ ವಿ.ಪಾರ್ಥಿಬನ್ ಐತಿಹಾಸಿಕ ಆಬ್ಸರ್ವೇಶನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + nineteen =
Remember me
