
ಬೆಂಗಳೂರು:7ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರಬೇಕು ಮತ್ತು ಎನ್‌ಪಿಎಸ್ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರ ಸಚಿವಾಲಯ ನೌಕರರ ಸಂಘ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿತು.ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ೋಷಣೆಗಳನ್ನುಕೂಗಿದ ಸರ್ಕಾರಿ ನೌಕರರು, ಜು.29ರಂದು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟವಧಿ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿಯೂ ೋಷಿಸಿದರು.ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು. ಖಾಲಿ ಇರುವ 2.60 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಸರ್ಕಾರ ಕೇವಲ ಭರವಸೆಯಲ್ಲಿಯೇ ಕಾಲ ಕಳೆಯುತ್ತಿದೆ. ಮೊದಲು ತನ್ನ ನೌಕರರ ಬಗ್ಗೆ ಕಾಳಜಿ ವಹಿಸಬೇಕು. ಬೇಡಿಕೆ ಈಡೇರಿಕೆಗೆ ಕಾಲ ಮಿತಿಯನ್ನು ನಿಗಧಿ ಮಾಡಬೇಕು ಎಂದು ಆಗ್ರಹಿಸಿದರು.ರಾಜ್ಯ ಸರ್ಕಾರಿ ನೌಕರರು ಕರೆ ನೀಡಿರುವ ಪ್ರತಿಭಟನೆಯಲ್ಲಿ ಸಚಿವಾಲಯ ನೌಕರರ ಸಂಘವೂ ಭಾಗವಹಿಸಲಿದೆ. ಎಲ್ಲಾ ನೌಕರರ ಪರವಾಗಿಯೇ ಈ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ ಎಂದು ಪದಾಧಿಕಾರಿಗಳು ತಿಳಿಸಿದರು.ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಮಾತನಾಡಿ, ಸರ್ಕಾರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಗಮನ ನೀಡಬೇಕು. 7ನೇ ವೇತನ ಆಯೋಗದ ವರದಿಯನ್ನು ತಕ್ಷಣದಿಂದಲೇ ಜಾರಿಗೆ ನೀಡಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದರು.ಪ್ರತಿಭಟನೆ ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರಿಗೆ ಮನವಿ ಸಲ್ಲಿಸಲಾಯಿತು.ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + one =
Remember me
