ಬೆಂಗಳೂರು: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 5 ಸಾವಿರ ರೂ. ಪರಿಹಾರ ಧನ ಆಟೋ, ಟ್ಯಾಕ್ಸಿ ಚಾಲಕರಿಗೆ ಗಗನ ಕುಸುಮದಂತೆ ಭಾಸವಾಗುತ್ತಿದೆ.
ಆಧುನಿಕ ತಂತ್ರಜ್ಞಾನದ ಬಗ್ಗೆ ಹೆಚ್ಚು ತಿಳಿದಿಲ್ಲವಾದರೂ, ಸೇವಾ ಸಿಂಧು ಪೋರ‌್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕೆಂಬ ಷರತ್ತನ್ನು ಪಾಲಿಸಲು ಚಾಲಕರು ಸಿದ್ಧರಾಗಿದ್ದಾರೆ. ಆದರೆ ಶನಿವಾರ ರಾಜ್ಯ ಸರ್ಕಾರ ಹೊರಡಿಸಿರುವ ಇನ್ನಷ್ಟು ಷರತ್ತುಗಳು ಅವರನ್ನು ಕಂಗೆಡಿಸಿವೆ.
ಇದನ್ನೂ ಓದಿನೇರವಾಗಿ ಬಡವರ ಕೈಗೆ ಹಣ ನೀಡುವಂತೆ ರಾಹುಲ್​ ಗಾಂಧಿ ಆಗ್ರಹ
2020ರ ಮಾರ್ಚ್ 24ರಂದು ಅನ್ವಯವಾಗುವಂತೆ ಡ್ರೈವಿಂಗ್ ಲೈಸೆನ್ಸ್ ಮತ್ತು ಫಿಟ್‌ನೆಸ್ ಸರ್ಟಿಫಿಕೇಟ್ ಹೊಂದಿರುವ ವಾಹನಗಳಿಗೆ ಮಾತ್ರ ಈ ಪರಿಹಾರಧನ ಅನ್ವಯವಾಗುತ್ತದೆ. ಅಂದು ಚಾಲ್ತಿಯಲ್ಲಿದ್ದ ಡ್ರೈವಿಂಗ್ ಲೈಸೆನ್ಸ್ ಸಂಖ್ಯೆಗಿಂತ ಹೆಚ್ಚು ಫಲಾನುಭವಿಗಳು ಇಲ್ಲದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸರ್ಕಾರ ಆದೇಶಿಸಿದೆ.
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಸಂಖ್ಯೆ ಈ ಮೂರೂ ಅಂಶಗಳು ಎಲ್ಲಾ ಫಲಾನುಭವಿಗಳಿಗೆ ಅನನ್ಯವಾಗಿರಬೇಕು ಎಂದೂ ಸೂಚಿಸಲಾಗಿದೆ. ಅದರರ್ಥ, ಒಂದೇ ವಾಹನವನ್ನು ಇಬ್ಬರು, ಮೂವರು ಚಾಲಕರು ಪಾಳಿಯ ಮೇಲೆ ಓಡಿಸುತ್ತಿದ್ದರೆ ಅವರಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಸಿಗಲು ಸಾಧ್ಯ.
ಇದನ್ನೂ ಓದಿಮೀನು ಹಿಡಿಯುವಾಗ ನದಿಗೆ ಜಾರಿದ್ದ ಮೊಬೈಲ್ 8 ತಿಂಗಳ ಬಳಿಕ ಪತ್ತೆ: ಮಾಲೀಕನಿಗೆ ಕಾದಿತ್ತೊಂದು ಸರ್ಪ್ರೈಸ್​​!​
ಕೆಲವರು ಒಂದಕ್ಕಿಂತ ಹೆಚ್ಚು ಆಟೋ, ಟ್ಯಾಕ್ಸಿಗಳನ್ನು ಇಟ್ಟುಕೊಂಡಿರುತ್ತಾರೆ. ಅಂತಹ ಆಟೋ, ಟ್ಯಾಕ್ಸಿ ಮಾಲೀಕರಿಗೆ ಪರಿಹಾರ ಧನ ಸಂದಾಯವಾದರೆ ನಿಜಕ್ಕೂ ಜೀವನ ನಿರ್ವಹಣೆ ಕಷ್ಟವಾಗಿರುವ ಚಾಲಕರಿಗೆ ಪರಿಹಾರಧನ ಸಿಗದಂತಾಗುತ್ತದೆ. ಒಬ್ಬರೇ ಎರಡೆರಡು ವಾಹನಗಳ ಸಂಖ್ಯೆ ನೀಡಿ ಪರಿಹಾರಧನ ಪಡೆಯುವುದನ್ನು ತಪ್ಪಿಸುವುದಕ್ಕಾಗಿ ಬ್ಯಾಂಕ್ ಖಾತೆಗೆ ಫಲಾನುಭವಿಗಳ ಆಧಾರ್, ಪ್ಯಾನ್ ಕಾರ್ಡ್ ಲಿಂಕ್ ಆಗಿರುವುದನ್ನು ಗಮನಿಸಬೇಕು ಎಂದು ಸೂಚಿಸಲಾಗಿದೆ.
ಫಲಾನುಭವಿಗಳ ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೆ ಅಂತಹವರಿಗೆ ಪರಿಹಾರಧನ ನೀಡಬಾರದು. ಲಾಕ್‌ಡೌನ್ ಅವಧಿಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎಂಬುದನ್ನು ಸ್ವಯಂ ದೃಢೀಕರಣದಿಂದ ಖಚಿತಪಡಿಸಿಕೊಂಡು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಬೇಕು ಎಂದು ಎಂದೂ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿಪತ್ನಿ, ಮಗ ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿ ಶವವಾಗಿ ಬಿದ್ದಿದ್ದ ಡಿಎಸ್​ಪಿ
ತಂಬಾಕಿನಲ್ಲಿದೆ ಕರೊನಾ ಗುಣಪಡಿಸುವ ಶಕ್ತಿ, ಸಿಗರೇಟ್​ ಕಂಪನಿ ತಯಾರಿಸಿದೆ ಲಸಿಕೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 1 =
Remember me
