ಬೆಂಗಳೂರು: ಕ್ರೀಡಾ ಚಟುವಟಿಕೆಗಳಿಗೆ ಒತ್ತಾಸೆ, ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ರಾಜ್ಯ ಸರ್ಕಾರದ ಅನ್ಯ ಇಲಾಖೆಗಳ ಹುದ್ದೆಗಳಲ್ಲಿ ಶೇಕಡ ಎರಡರಷ್ಟು ಕ್ರೀಡಾಪಟುಗಳಿಗೆ ಮೀಸಲಿಡಬೇಕೆಂಬ ಕೋರಿಕೆಯನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಚೀನಾದಲ್ಲಿ ಇತ್ತೀಚೆಗೆ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ, ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಗದು ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಿದ ನಂತರ ಅವರು ಮಾತನಾಡಿದರು.
ಈಗಾಗಲೇ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ತಲಾ ಶೇಕಡ 3% ರಷ್ಟು ಹುದ್ದೆಗಳು ಮೀಸಲಿಡಲಾಗಿದೆ.  ಉಳಿದ ಇಲಾಖೆಯಲ್ಲೂ ಕೇಳಿದ್ದಾರೆ ಅದನ್ನೂ ಮಾಡುತ್ತೇವೆ. ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯು ದೇಶ, ರಾಜ್ಯಕ್ಕೆ ಹೆಮ್ಮೆ ಹಾಗೂ ಅಭಿಮಾನದ ಸಂಗತಿಯಾಗಿದೆ ಎಂದರು.
ದೇಶಕ್ಕೆ ಮಾತ್ರವಲ್ಲ ರಾಜ್ಯಕ್ಕೆ ಬೆಳ್ಳಿ ಮತ್ತು ಚಿನ್ನದ ಪದಕ ಗೆದ್ದು ತಂದಿದ್ದೀರಿ. ನಿಮ್ಮಲ್ಲರಿಗೂ ಸರ್ಕಾರ ಮತ್ತು ಜನರಿಂದ ಅಭಿನಂದನೆ ಸಲ್ಲಿಸುವೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಕಷ್ಟು ಪೈಪೋಟಿ ಇರುವುದರಿಂದ ಪದಕ ಗೆಲ್ಲುವುದು ಬಹಳ ಕಷ್ಟ. ನಿರಂತರ ಪರಿಶ್ರಮದಿಂದ ಈ ಸಾಧನೆ ಮೆರೆದಿದ್ದೀರಿ.
ಒಲಿಂಪಿಕ್‌ನಲ್ಲಿ ಚಿನ್ನ ಬೆಳ್ಳಿ ಪದಕ ಗೆಲ್ಲುವ ಪ್ರಯತ್ನ ಮಾಡಿರಿ. ನಿಮ್ಮ ಕುಟುಂಬದವರಿಗೂ ಕೂಡ ಅಭಿನಂದನೆ. ನಿಮ್ಮ ಭವಿಷ್ಯ ಉಜ್ವಲ ಆಗಿರಲಿ ಎಂದು ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದರು.
ಏಷ್ನನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಾಲ್ವರಿಗೆ ತಲಾ 25 ಲಕ್ಷ ರೂ, ಬೆಳ್ಳಿ ಪದಕ ವಿಜೇತ ನಾಲ್ವರಿಗೆ ತಲಾ 15 ಲಕ್ಷ ರೂ ಹಾಗೂ ಮೂವರು ತರಬೇತುದಾರರಿಗೆ ತಲಾ ಐದು ಲಕ್ಷ ರೂ ನಗದು ಪುರಸ್ಜಾರವನ್ನು ನೀಡಲಾಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಏಷ್ಯನ್‌ ಗೇಮ್ಸ್‌ನ ಪದಕ ವಿಜೇತ ರಾಜ್ಯದ ಕ್ರೀಡಾಪಟುಗಳಾದ ರಾಜೇಶ್ವರಿ ಗಾಯಕ್ವಾಡ್‌ (ಕ್ರಿಕೆಟ್- ಚಿನ್ನ), ರೋಹನ್‌ ಬೋಪಣ್ಣ (ಟೆನ್ನಿಸ್- ಮಿಕ್ಸ್‌ಡ್‌ ಡಬಲ್ಸ್- ಚಿನ್ನ), ಮಿಜೋ ಚಾಕೋ ಕುರಿಯನ್‌, ನಿಹಾಲ್‌ ಜೋಯಲ್‌ (ಅಥ್ಲೆಟಿಕ್ಸ್‌  ಪುರುಷರ 4*400 ಮೀ. ರಿಲೇ -ಕಾಯ್ಡಿರಿಸಿದ ಕ್ರೀಡಾಪಟು- ಚಿನ್ನ), ಮಿಥುನ್‌ ಮಂಜುನಾಥ್‌ (ಪುರುಷರ ಬ್ಯಾಡ್ಮಿಂಟನ್- ಬೆಳ್ಳಿ), ಸಾಯಿ ಪ್ರತೀಕ್‌ (ಪುರುಷರ ಬ್ಯಾಡ್ಮಿಂಟನ್‌ ಬೆಳ್ಳಿ), ದಿವ್ಯಾ (ಶೂಟಿಂಗ್‌- ಎರಡು ಬೆಳ್ಳಿ ಪದಕ), ಹಾಗೂ ತರಬೇತುದಾರರಾದ ವಿ.ತೇಜಸ್ವಿನಿ ಬಾಯಿ (ಕಬಡ್ಡಿ- ಚಿನ್ನ), ಅಂಕಿತ ಬಿ.ಎಸ್. (ಹಾಕಿ- ಕಂಚು), ಸಿ.ಎ.ಕುಟ್ಟಪ್ಪ (ಬಾಕ್ಸಿಂಗ್‌ ಮುಖ್ಯ ತರಬೇತುದಾರರು- 1 ಬೆಳ್ಳಿ ಮತ್ತು 4 ಕಂಚು) ಅವರಿಗೆ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವತಿಯಿಂದ ಸನ್ಮಾನ ಮಾಡಿ, ನಗದು ಪುರಸ್ಕಾರ ಪ್ರದಾನ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 7 =
Remember me
