
ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸೌಹಾರ್ಧಯುತವಾಗಿ ಭೇಟಿ ಮಾಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲಿನಿ ರಜನೀಶ್ ಅವರು, ಮಾಧ್ಯಮಗಳು, ಜನರು ಮತ್ತು ಸರ್ಕಾರದ ಸೇತುವೆಯಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ತಾವು ಸೇವೆ ಸಲ್ಲಿಸಿದ ಎಲ್ಲಾ ಕಡೆಯಲ್ಲೂ ಸಹಕಾರ ಸಿಕ್ಕಿದೆ. ಸರ್ಕಾರ ಹಾಗೂ ಮಾಧ್ಯಮ ಕ್ಷೇತ್ರ ಸೌಹಾರ್ದಯುತವಾಗಿ ಸೇರಿ ಕೆಲಸ ಮಾಡೋಣ. ತಮ್ಮ ಸಲಹೆಗೆ ಸರ್ಕಾರ ಸದಾ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದರು. ಇದೇ ಸಂದರ್ಭದಲ್ಲಿ ಕಲಬುರ್ಗಿ, ಬೆಳಗಾವಿ ಸೇರಿದಂತೆ ನಾನಾ ಕಡೆಯಲ್ಲಿ ಕೆಲಸ ಮಾಡಿದ್ದನ್ನು ಅವರು ನೆನಪಿಸಿಕೊಂಡರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಭವಾನಿಸಿಂಗ ಠಾಕೂರ, ಬೀದರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಸಂಘದ ಸದಸ್ಯರಾದ ಸುನಿಲಕುಮಾರ ಹೊನ್ನಾಳೆ ಈ ಸಂದರ್ಭದಲ್ಲಿ ಹಾಜರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − eleven =
Remember me
