ಬೆಂಗಳೂರುಉನ್ನತ ಶಿಕ್ಷಣದಲ್ಲಿ ಅಮೆರಿಕ ವಿಶ್ವವಿದ್ಯಾಲಯಗಳೊಂದಿಗೆ ಅಂತಾರಾಷ್ಟ್ರೀಯ ಪಾಲುದಾರಿಕೆ ಮತ್ತು ಸಹಯೋಗದ ಶಿಕ್ಷಣಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲು ಸರ್ಕಾರವು ಮುಕ್ತವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ತಿಳಿಸಿದರು.
ಅಮೆರಿಕ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಚೆನ್ನೈನ ಯುಎಸ್ ಕಾನ್ಸುಲ್ ಜನರಲ್ ಹಮ್ಮಿಕೊಂಡಿರುವ ಎಜುಕೇಶನ್ ಟ್ರೇಡ್ ಮಿಷನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕೌಶಲಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳು ಅಮೆರಿಕಕ್ಕೆ ತೆರಳಿ ಅಧ್ಯಯನ ಮಾಡುವುದು ಕೆಲವರಿಗೆ ಆರ್ಥಿಕವಾಗಿ ಸಾಧ್ಯವಾಗುವುದಿಲ್ಲ, ಹಾಗಾಗಿ ಅಮೆರಿಕ ಮತ್ತು ಕರ್ನಾಟಕದ ಸರ್ಕಾರಿ ವಿಶ್ವವಿದ್ಯಾಲಯಗಳು ಸಂಯುಕ್ತವಾಗಿ ತರಗತಿಗಳನ್ನು ನಡೆಸುವಂತಾಗಬೇಕು ಇದಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.
ಅಮೆರಿಕದ 18 ವಿಶ್ವವಿದ್ಯಾಲಯದ ಪ್ರತಿನಿಧಿಗಳು ಯುಎಸ್ ಉನ್ನತ ಶಿಕ್ಷಣ ಮೇಳದಲ್ಲಿ ಪಾಲ್ಗೊಂಡಿದ್ದರು. ಚೆನ್ನೈನ ಯುಎಸ್ ಕಾನ್ಸುಲ್ ಜನರಲ್ ಕ್ರಿಸ್ಟೋಫರ್ ಹಾಡ್ಜಸ್ ಕೌನ್ಸಿಲರ್ ಫಾರ್ ಕಮರ್ಷಿಯಲ್ ಅಫೀಸರ್ ಪ್ರೊ.ಅರುಣ್ ತಡಗೋಪಂ, ಪ್ರೊ. ಕೆಎನ್‌ಎಸ್ ಆಚಾರ್ಯ ಹಾಗೂ ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಶ್ರೀಕರ್ ಸೇರಿ ಹಲವರು ಪಾಲ್ಗೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
