ಬೆಂಗಳೂರು: ಕರೊನಾ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಗ್ರಾಮಾಂತರ ಶೈಕ್ಷಣಿಕ ಜಿಲ್ಲೆಗಳಲ್ಲಿ 1 ರಿಂದ 10ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳನ್ನು ಸರ್ಕಾರ ನಿವಾರಣೆ ಮಾಡಿದೆ.
ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಇಚ್ಚಿಸಿದರೆ ಅನುಮತಿ ನೀಡಲಾಗುವುದು. ಹಿಂದೆ ಕರೊನಾ ಬಗ್ಗೆ ಎರಡು ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು, ಇದೀಗ ಪರೀಕ್ಷೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳನ್ನು ನಿವಾರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್​ಕುಮಾರ್ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.
ಮಾ.9 ರಿಂದ 3 ಶೈಕ್ಷಣಿಕ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಇದೀಗ ಮತ್ತಷ್ಟು ಚರ್ಚೆ ನಡೆಸಿ ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಯಾವುದೇ ಆತುರದ ನಿರ್ಧಾರ ಕೈಗೊಂಡಿಲ್ಲ. 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ರಜೆ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಎಫ್​ಎ 1, ಎಫ್​ಎ2, ಎಫ್​ಎ3, ಎಫ್​ಎ 4 ಹಾಗೂ ಎಸ್​ಎ 1ರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಶ್ರೇಣಿಕೃತ ಫಲಿತಾಂಶ ಪ್ರಕಟಿಸಿ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು. ಈ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆಯೇ ಪರೀಕ್ಷೆಗಳು ನಡೆಯಲಿವೆ ಎಂದರು.
ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೂ ಅನ್ವಯವಾಗುತ್ತದೆ. ಆಡಳಿತ ಮಂಡಳಿಗಳು ಸರ್ಕಾರದ ಈ ನಿರ್ಧಾರವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಾಕೀತು ಮಾಡಿದರು. ಪೂರ್ವ ಪ್ರಾಥಮಿಕ, ಎಲ್​ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಘೋಷಣೆ ಮಾಡುವುದು. 2020-21ನೇ ಸಾಲಿನ ತರಗತಿಗಳನ್ನು ವೇಳಾಪಟ್ಟಿಯಂತೆ ಆರಂಭಿಸುವುದು.
1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ ಈಗಾಗಲೇ ರಜೆ ನೀಡಲಾಗಿದೆ. 2019-20ನೇ ಸಾಲಿನಲ್ಲಿ ಎಫ್​ಎ 1, ಎಫ್​ಎ2, ಎಫ್​ಎ3, ಎಫ್​ಎ 4 ಹಾಗೂ ಎಸ್​ಎ 1ರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಶ್ರೇಣಿಕೃತ ಫಲಿತಾಂಶ ಪ್ರಕಟಿಸಿ ಮುಂದಿನ ತರಗತಿಗೆ ಬಡ್ತಿ ನೀಡಲು ತೀರ್ವನ. ಈ ತರಗತಿಯ ಮಕ್ಕಳಿಗೆ ಗುರುವಾರ (ಮಾ.12)ದಿಂದಲೇ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಬೇಸಿಗೆ ರಜೆ ನಂತರ 2020-21 ನೇ ಸಾಲಿನ ವೇಳಾಪಟ್ಟಿಯಂತೆ ತರಗತಿಗಳನ್ನು ಆರಂಭಿಸುವುದು.
7 ರಿಂದ 9 ನೇ ತರಗತಿಯ ತನಕ ಶುಕ್ರವಾರ (ಮಾ.13)ದಿಂದಲೇ ಪರೀಕ್ಷಾ ಪೂರ್ವ ಸಿದ್ಧತೆ ಮಾಡಿಕೊಳ್ಳುವುದು. ಮಾ. 23 ರೊಳಗೆ  ಈ ತರಗತಿಯ ಪರೀಕ್ಷೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ ಬೇಸಿಗೆ ರಜೆ ಘೋಷಿಸುವುದು.10 ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿ ಮಾಡಿರುವ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸುವುದು. ಬೇಸಿಗೆ ರಜೆಯ ನಂತರ 2020-21 ನೇ ಸಾಲಿನ ವೇಳಾಪಟ್ಟಿಯಂತೆ ತರಗತಿಗಳು ಪುನರಾರಂಭ ಮಾಡುವುದು.
ಪಾಲಕರೇ ಗೊಂದಲ ಬೇಡ; 1ರಿಂದ 6ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ- ಶಿಕ್ಷಣ ಸಚಿವರ ಪತ್ರಿಕಾಗೋಷ್ಠಿ ವಿಡಿಯೋ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 14 =
Remember me
