ಬೆಂಗಳೂರು:ನೌಕರರು ಹಾಗೂ ಅಧಿಕಾರಿಗಳ ನಡುವಿನ ಹಗ್ಗ ಜಗ್ಗಾಟದ ನಡುವೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 3490 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ರಾಜ್ಯ ಮಟ್ಟದ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದೆ.
ಜೇಷ್ಠತೆ ನಿರ್ಧರಣೆ ಸಂಬಂಧ ಬಾಧಿತರಾದ ಕೆಲವು ಪಿಡಿಒಗಳು ಉಚ್ಚ ನ್ಯಾಯಾಲಯದಲ್ಲಿ ಹಲವು ರಿಟ್ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದರು.
ನ್ಯಾಯಾಲಯ ಪಂಚಾಯತ್ ರಾಜ್ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಪ್ರಸ್ತುತ ಜಾರಿಯಲ್ಲಿರುವ ನಿಯಮಗಳಿಗನುಸಾರ ಜೇಷ್ಠತಾ ಪಟ್ಟಿ ಪ್ರಕಟಿಸಲು ಆದೇಶಿಸಿತ್ತು.
ಜೇಷ್ಠತಾ ಪಟ್ಟಿ ಪ್ರಕಟಿಸುವುದು ವಿಳಂಬವಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಆಯುಕ್ತರ ಕಚೇರಿ ಎದುರು ಇತ್ತೀಚೆಗೆ ಪ್ರತಿಭಟನೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ತ್ವರಿತ ಕ್ರಮ ಕೈಗೊಂಡಿರುವ ಸರ್ಕಾರ ಜೇಷ್ಠತಾ ಪಟ್ಟಿಯ ಕರಡು ಪ್ರಕಟಿಸಿದೆ.
ಜೂ.13 ರಂದು ಜೇಷ್ಠತಾ ಪಟ್ಟಿಗೆ ಸಂಬಂಧಿಸಿದ ಪ್ರಕಟಣೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸರ್ಕಾರ 15 ದಿನ ಗಡುವು ನೀಡಿದೆ.ಆಕ್ಷೇಪಣೆಗಳನ್ನು ಸೂಕ್ತ ದಾಖಲೆಗಳೊಂದಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 3ನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು-01 ಇವರಿಗೆ ಅಥವಾ[email protected]ಅಥವಾ[email protected]ಗೆ ಸಲ್ಲಿಸುವಂತೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 3 =
Remember me
