ಬೆಂಗಳೂರು:ಗಿಗ್ ಕಾರ್ಮಿಕರಿಗೆ ಆದಾಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಗ್ರಿಗೇಟರ್‌ಗಳ ಜತೆ ಸೋಮವಾರ ಸಭೆ ನಡೆಸಿದರು. ಪ್ಲಾಟ್ ಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಬದುಕಿನ ಭದ್ರತೆಗೆ ನಿಧಿ ಸಂಗ್ರಹಕ್ಕೆ ಈ ಸಭೆ ನಡೆಸಲಾಯಿತು.
ಅಗ್ರಿಗೇಟರ್‌ಗಳ ವಹಿವಾಟು ಅಥವಾ ವ್ಯವಹಾರದ ಮೇಲೆ ಸೆಸ್ ವಿಧಿಸುವ ಕುರಿತು ಸುದೀರ್ಘ ಚರ್ಚೆ ನಡೆದು ಅಂತಿಮವಾಗಿ ಪ್ರತಿ ವ್ಯವಹಾರದ ಮೇಲೆ ಸೆಸ್ ವಿಧಿಸಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಗಿಗ್ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪನೆ, ಆದಾಯ ಭದ್ರತೆ, ಕಲ್ಯಾಣ ಶುಲ್ಕ ವಿಧಿಸುವ ಹಿನ್ನೆಲೆಯಲ್ಲಿ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯನ್ನು ರೂಪಿಸಿದೆ. ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ 2024ರ ಕರಡನ್ನು ಕಾರ್ಮಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಗೆ ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ. ವಿಧಾನಮಂಡಲದ ಮುಂಗಾರು ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯುವ ಸಾಧ್ಯತೆ ಇದೆ.
ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣಕ್ಕಾಗಿ ಕಾನೂನು ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಕರಡು ಮಸೂದೆ ಪ್ರಕಟಿಸಿದೆ.
ಗಿಗ್ ಕಾರ್ಮಿಕರನ್ನು ಮಂಡಳಿಯಲ್ಲಿ ನೋಂದಾಯಿಸಿ ಅವರಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವ ಪ್ರಸ್ತಾವ ಮಸೂದೆಯಲ್ಲಿದೆ. ಇದಕ್ಕಾಗಿ ಗಿಗ್ ಕಾರ್ಮಿಕರ ಕೆಲಸಕ್ಕೆ ವಿಧಿಸುವ ಶುಲ್ಕಕ್ಕೆ ಅನುಸಾರವಾಗಿ ಪ್ರತ್ಯೇಕ ಸೆಸ್ ಸಂಗ್ರಹಿಸಲಾಗುತ್ತದೆ. ನೋಂದಣಿ ಶುಲ್ಕವೂ ಸೇರಿದಂತೆ ಸಂಗ್ರಹವಾಗುವ ಎಲ್ಲ ಮೊತ್ತವನ್ನು ಗಿಗ್ ಕಾರ್ಮಿಕರ ಕಲ್ಯಾಣ ನಿಧಿಗೆ ಬಳಸುವ ಉದ್ದೇಶ ಹೊಂದಲಾಗಿದೆ.
ಈ ಮಸೂದೆ ಅನ್ವಯ ಗಿಗ್ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಕಂಪನಿ ಕಾರ್ಮಿಕರ ಮಾಹಿತಿಯನ್ನು ಮಂಡಳಿ ಜತೆ ಹಂಚಿಕೊಳ್ಳಬೇಕು. ಸೇವಾದಾರ ಕಂಪನಿಯೂ ಮಂಡಳಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನಿರ್ದಿಷ್ಟ ಕಾರಣಗಳಲ್ಲದೇ ಗಿಗ್ ಕಾರ್ಮಿಕರನ್ನು ಕೆಲಸದಿಂದ ಕೈಬಿಡುವಂತಿಲ್ಲ. ಅವರಿಗೆ ಪಾವತಿಸಬೇಕಾದ ಮೊತ್ತದಲ್ಲಿ ಕಡಿತ ಮಾಡುವಂತಿಲ್ಲ.
ಕಾರ್ಮಿಕರ ಕುಂದು ಕೊರತೆಗಳನ್ನು ಪರಿಹರಿಸುವ ಅಧಿಕಾರವೂ ಮಂಡಳಿಗೆ ಇದೆ. ಕಾಯ್ದೆಯನ್ನು ಉಲ್ಲಂಘಿಸುವವರಿಗೆ 1 ಲಕ್ಷ ರೂ.ವರೆಗೆ ದಂಡ ವಿಧಿಸುವುದಕ್ಕೂ ಕರಸು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.ಬೆಂಗಳೂರಿನಲ್ಲೇ ಸುಮಾರು ಎರಡು ಲಕ್ಷ ಗಿಗ್ ಕಾರ್ಮಿಕರು ಜೊಮ್ಯಾಟೋ, ಪೋರ್ಟರ್, ಸ್ವಿಗ್ಗಿ ಮತ್ತು ಡಂಝೋದಂತಹ ವಿವಿಧ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ದುಡಿಯುತ್ತಿದ್ದಾರೆ. ಇವರೆಲ್ಲ ಗಿಗ್ ಕಾಯ್ದೆ ಜಾರಿಯಾದರೆ ಗಿಗ್ ಕಾರ್ಮಿಕರ ಸವಲತ್ತುಗಳನ್ನು ಪಡೆಯಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
