
ಬೆಂಗಳೂರು:ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅವರ ವಿಷಯದಲ್ಲಿ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ಮಾಡುವಂತೆ ಸಹಕಾರ ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು, ನೌಕರರ ಸಂಘದ ಕಾರ್ಯದರ್ಶಿಗೆ ನೋಟೀಸ್ ಜಾರಿ ಮಾಡಿದ್ದಾರೆಯೇ ಹೊರತು ಅಮಾನತ್ತು ಆದೇಶ ಹೊರಡಿಸಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಸ್ಪಷ್ಟಪಡಿಸಿದೆ.ಯಾರೇ ದೂರು ನೀಡಿದರೂ, ಅದಕ್ಕೆ ಸಂಬಂದಿಸಿದಂತೆ ಇಲಾಖಾಧಿಕಾರಿಗಳು ಪತ್ರ ಬರೆಯುವುದು ಸರ್ವೆ ಸಾಮಾನ್ಯ. ರಾಜ್ಯ ಪರಿಷತ್ ಸದಸ್ಯರೊಬ್ಬರ ದೂರಿನ ಹಿನ್ನೆಲೆಯಲ್ಲಿ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಈ ಬಗ್ಗೆ ನಮಗೆ ಪತ್ರ ಬರೆದಿದ್ದಾರೆ. ಆದರೆ ಇದು ಆದೇಶವಲ್ಲ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.ಸಂಘದ ಅಧ್ಯಕ್ಷರಾದ ಷಡಾಕ್ಷರಿ ಅವರ ವರ್ಗಾವಣೆ ವಿಷಯ ಕೆಎಟಿ ನ್ಯಾಯಾಲಯದಲ್ಲಿದೆ. ಹಾಗಾಗಿ ಹೆಚ್ಚಿನ ವಿಷಯಗಳ ಬಗ್ಗೆ ಮಾತನಾಡುವುದು ಸರಿಯಲ್ಲ. ಸಹಕಾರ ಸಂಘದ ನೋಂದಣಾಧಿಕಾರಿಗಳ ಪತ್ರಕ್ಕೆ ಉತ್ತರ ನೀಡಲಾಗುವುದು ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fifteen =
Remember me
