ಬೆಂಗಳೂರು:ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಖಂಡಿಸಿ ಬಜರಂಗದಳ ಪ್ರತಿಭಟನೆ!
ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು.
— Siddaramaiah (@siddaramaiah)July 17, 2024

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಅಂತಲೂ ಬರೆದುಕೊಂಡಿದ್ದಾರೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಈ ಮಸೂದೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಂಪನಿಯವರು ವಿರೋಧ ವ್ಯಕ್ತಪಡಿಸಿದ್ದರು. ಕಿರಣ್‌ ಮಜುಂದಾರ್, ಮೋಹನ್​ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದ್ದರು.
ಈ ರೀತಿಯ ಕ್ರಮದಿಂದ ಐಟಿ ಉದ್ಯಮಕ್ಕೆ ತೊಂದರೆಯಾಗಲಿದೆ. ಉದ್ಯಮದಲ್ಲಿ ಗುಣಮಟ್ಟದ ಸೇವೆ ನೀಡಲು ಸಮಸ್ಯೆಯಾಗುತ್ತದೆ ಎಂದು ಉದ್ಯಮಿಗಳು ಆಕ್ಷೇಪ ಎತ್ತಿದ್ದರು. ಕೆಲವರಂತೂ ಇದು ತಾರತಮ್ಯದ ಮಸೂದೆ ಎಂದು ಆಕ್ಷೇಪ ವ್ಯಕ್ತಪಸಿಡಿದ್ದರು. ಹೀಗೆ ಉದ್ಯಮ ವಲಯದಲ್ಲಿ ಆಕ್ಷೇಪ ಕೇಳಿಬಂದ ನಂತರ ಎಚ್ಚೆತ್ತ ಸಿದ್ದರಾಮಯ್ಯ ಸರ್ಕಾರ, ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.
ವೃದ್ಧೆ ಸಾವಿಗೆ ಸಂತಾಪ ಸೂಚಿಸಿದ ಕೋತಿ; ಮನಕಲುಕುವ ವಿಡಿಯೋ ವೈರಲ್…!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 4 =
Remember me
