ಧಾರವಾಡ:ರಾಜ್ಯದಲ್ಲಿ ಪಠ್ಯಪರಿಷ್ಕರಣೆ ವಿಚಾರವಾಗಿ ಎದ್ದಿರುವ ವಿವಾದದ ನಡುವೆ ಇದೀಗ ಇನ್ನೊಂದು ವಿಚಾರ ಪ್ರಸ್ತಾಪಗೊಂಡಿದೆ. ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲೇ ಕಲಿಯುವುದು, ಜನಪ್ರತಿನಿಧಿಗಳು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯವುದು ಹಾಗೂ ಸರ್ಕಾರಿ ಉದ್ಯೋಗಿಗಳ ಮಕ್ಕಳು ಕೂಡ ಸರ್ಕಾರಿ ಶಾಲೆಯಲ್ಲೇ ಕಲಿಯಬೇಕು, ಸರ್ಕಾರಿ ಉದ್ಯೋಗಿಗಳು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು ಎಂಬಿತ್ಯಾದಿ ವಿಚಾರಗಳು ಆಗಾಗ ಪ್ರಸ್ತಾಪವಾಗುತ್ತಲೇ ಇರುತ್ತವೆ.
ಇದೀಗ ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳು ಕನ್ನಡ ಮಾಧ್ಯಮದಲ್ಲೇ ಕಲಿಯಬೇಕು ಎಂಬ ವಿಚಾರವೊಂದು ಪ್ರಸ್ತಾಪವಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಅವರು ಇಂಥದ್ದೊಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಇಂದು ಮಾತನಾಡಿದ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಸರ್ಕಾರಿ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಆಗ ಮಾತ್ರ ಕನ್ನಡ ವಿಷಯದಲ್ಲಿ ಎಲ್ಲವೂ ಸರಿ ಹೋಗುತ್ತದೆ. ಮೊದಲು ಶಿಕ್ಷಕರ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಬಳಿಕ ರಾಜ್ಯ ಸರ್ಕಾರಿ ನೌಕರರ ಮಕ್ಕಳೂ ಕನ್ನಡದಲ್ಲೇ ಕಲಿಯಬೇಕು. ಈ ಬಗ್ಗೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಮಾಡಲಾಗುವುದು. ಆ ನಿರ್ಣಯಗಳನ್ನು ಅನುಷ್ಠಾನ ಮಾಡಿಸಬೇಕು. ಇಲ್ಲವಾದರೆ ಕನ್ನಡ ವಿಷಯ ಬಹಳ ಕಷ್ಟವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
