ಬೆಳಗಾವಿ:ಬರದಿಂದ ಬೆಳೆ ನಷ್ಟಕ್ಕೀಡಾಗಿರುವ ರೈತರಿಗೆ 2 ಸಾವಿರ ರೂ.ವರೆಗೆ ಬರ ಪರಿಹಾರ ನೀಡುವ ಪ್ರಕ್ರಿಯೆಗೆ ಒಂದು ವಾರದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಕೖಷ್ಣ ಬೈರೇಗೌಡ ಪ್ರಕಟಿಸಿದರು.
ವಿಧಾನಸಭೆಯಲ್ಲಿ ಬರದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಸುದೀರ್ಘ ಉತ್ತರ ನೀಡಿದ ಅವರು, ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದ ಪರಿಣಾಮ 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೖಷಿ ಬೆಳೆ ಹಾಗೂ 1 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ 236 ತಾಲೂಕುಗಳ ಪೈಕಿ ಮೂರು ಹಂತಗಳಲ್ಲಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ ಎಂದರು.
ಕೇಂದ್ರ ಸರ್ಕಾರಕ್ಕೆ ಮೂರು ಬಾರಿ ಪತ್ರ ಬರೆದು ಎನ್​ಡಿಆರ್​ಎಫ್ ಅಡಿಯಲ್ಲಿ 18,171 ಕೋಟಿ ರೂ. ನೆರವು ನೀಡುವಂತೆ ಕೋರಲಾಗಿದೆ. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವು ರಾಜ್ಯದ 13 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿ, ರಾಜ್ಯ ಸರ್ಕಾರ ನೀಡಿರುವ ವರದಿಯು ವಸ್ತುಸ್ಥಿತಿಯಿಂದ ಕೂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
ಸಂಪುಟ ಉಪ ಸಮಿತಿ ರಚನೆ:ಬೇರೆ ರಾಜ್ಯಗಳಿಗಿಂತ ಮೊದಲೇ ನಾವು ಬರ ಘೋಷಣೆ ಮಾಡಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬರ ನಿರ್ವಹಣೆ, ಪರಿಹಾರ ಸಂಬಂಧ ಒಂದೇ ಒಂದು ಸಂಪುಟ ಉಪ ಸಮಿತಿ ರಚನೆ ಮಾಡಿರಲಿಲ್ಲ. ನಾವು ಸಮಿತಿ ರಚನೆ ಮಾಡಿ ಎಂಟು ಸಭೆಗಳನ್ನು ಮಾಡಿದ್ದೇವೆ ಎಂದು ಹೇಳಿದರು.
ಚಿತ್ರದುರ್ಗ, ಗದಗದಲ್ಲಿ ಮೇವಿನ ಸಮಸ್ಯೆ:ಚಿತ್ರದುರ್ಗ, ಗದಗ ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಇದೆ. ಮುಂಜಾಗ್ರತೆಗಾಗಿ 20 ಕೋಟಿ ರೂ.ವೆಚ್ಚದಲ್ಲಿ 7.63 ಲಕ್ಷ ರೈತರಿಗೆ ಮೇವು ಬಿತ್ತನೆ ಕಿಟ್​ಗಳನ್ನು ಒದಗಿಸಲಾಗಿದೆ. 183 ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಲಾಗಿದೆ. ಉಸ್ತುವಾರಿ ಸಚಿವರು 31 ಜಿಲ್ಲೆಗಳಲ್ಲಿ 136 ಸಭೆಗಳನ್ನು ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 775.83 ಕೋಟಿ ರೂ., ತಹಸೀಲ್ದಾರ್​ಗಳ ಖಾತೆಯಲ್ಲಿ 119.23 ಕೋಟಿ ರೂ. ಇದೆ. ಶಾಸಕರ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್​ಗಳ ವಿವೇಚನೆಯಂತೆ ಹಣ ಬಳಕೆ ಮಾಡಲು ಅನುಮತಿ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
6237 ಸಮಸ್ಯಾತ್ಮಕ ಗ್ರಾಮ ಗುರುತು:ಸರ್ಕಾರ 6237 ಗ್ರಾಮಗಳನ್ನು ಗುರುತಿಸಲಾಗಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗಾಗಿ ಖಾಸಗಿ ಬೋರ್​ವೆಲ್​ಗಳು ಹಾಗೂ ಟ್ಯಾಂಕರ್​ಗಳನ್ನು ಬಾಡಿಗೆಗೆ ಪಡೆಯಲಾಗಿದೆ. 15 ದಿನಗಳ ಒಳಗೆ ಅವರ ಬಾಡಿಗೆಯನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.
ಸರ್ಕಾರಿ ಭೂಮಿ ರಕ್ಷಣೆಗೆ ಹದ್ದಿನ ಕಣ್ಣು:ಒತ್ತುವರಿಯಾದ ಕಂದಾಯ ಭೂಮಿಯನ್ನು ವಶಕ್ಕೆ ಪಡೆದ ಬಳಿಕ ಅದರ ರಕ್ಷಣೆಗೆ ವಿಶೇಷ ವ್ಯವಸ್ಥೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಶಾಸಕ ರವಿ ಗಣಿಗ ವಿಷಯ ಪ್ರಸ್ತಾಪಿಸಿ, ಕಂದಾಯ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡುತ್ತಿದ್ದು, ಅಂತಹವರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಉತ್ತರ ನೀಡಿದ ಸಚಿವರು, ಒತ್ತುವರಿ ತೆರವು ಮಾಡಿದ ಭೂಮಿಯನ್ನು ಗ್ರಾಮ ಲೆಕ್ಕಾಧಿಕಾರಿಯವರು ಮೂರು ತಿಂಗಳಿಗೊಮ್ಮೆ ವೀಕ್ಷಣೆ ಮಾಡಿಬರಬೇಕಾಗುತ್ತದೆ. ಪುನಃ ಒತ್ತುವರಿಯಾಗಿದ್ದರೆ ತಕ್ಷಣವೇ ತಹಸೀಲ್ದಾರ್ ಗಮನಕ್ಕೆ ತರಬೇಕಾಗುತ್ತದೆ. ತಹಸೀಲ್ದಾರ್ ಮುಂದಿನ 15 ದಿನಗಳಲ್ಲಿ ಒತ್ತುವರಿ ತೆರವು ಮಾಡಬೇಕಾಗುತ್ತದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 14 =
Remember me
