ಬೆಂಗಳೂರು:ಸಾರಿಗೆ ನೌಕರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು, ಮೂರು ದಿನಗಳ ಬಳಿಕ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್​ ಬಿದ್ದಿದೆ.
ತಮ್ಮನ್ನೂ ಸರ್ಕಾರಿ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು ಎಂಬುದರ ಜತೆಗೆ ಹಲವು ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಭಾನುವಾರ ಸಂಜೆ ನಡೆದ ಸಂಧಾನ ಸಭೆ ಸಕ್ಸಸ್​ ಆಗಿದ್ದು, ಮುಷ್ಕರ ಕೈ ಬಿಡುವ ಬಗ್ಗೆ ಫ್ರೀಡಂ ಪಾರ್ಕ್​ನಲ್ಲಿ ಘೋಷಣೆ ಮಾಡುವುದಾಗಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿದ್ದಾರೆ.
ಸರ್ಕಾರಿ ನೌಕರರ ಆರನೇ ವೇತನ ಜಾರಿ ಮಾಡಲು ಒಪ್ಪಿಗೆ ನೀಡಿದೆಯಾದರೂ ಸರ್ಕಾರಿ ನೌಕರರು ಅಂತ ಪರಿಗಣಿಸಲ್ಲ ಎಂದು ಸರ್ಕಾರ ಸ್ಪಷ್ಟನೆ ಕೊಟ್ಟಿದೆ. ಕೋವಿಡ್​ನಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ, ಸಿಬ್ಬಂದಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.
ಇನ್ನು ಇಂದು(ಭಾನುವಾರ) ರಾತ್ರಿಯಿಂದಲೇ ಸಾರಿಗೆ ಬಸ್​ ಸಂಚಾರ ಆರಂಭ ಆಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಇಂದು ರಾತ್ರಿಯಿಂದಲೇ ಸಾರಿಗೆ ಬಸ್​ ಸಂಚಾರ ಆರಂಭ
https://bit.ly/3a3fxed
ಮಗ ವಿಷ ಕುಡಿದಿದ್ದಾನೆ, ಅಲ್ಲಿಗೆ ಹೋಗಲು ಬಸ್​ ಇಲ್ಲ… ಬಸ್​ ನಿಲ್ದಾಣದಲ್ಲೇ ​ಕಣ್ಣೀರಿಟ್ಟ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 8 =
Remember me
