ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ನೀರು ಹರಿಸಿದೆ. ಯಾರನ್ನು ಕೇಳಿ ಇವರು ನೀರು ಹರಿಸಿದ್ದಾರೆ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತರಾಟೆ ತೆಗೆದುಕೊಂಡಿದ್ದಾರೆ.
ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರು ಹರಿಸುವ ವಿಚಾರದಲ್ಲಿ ಜನರನ್ನು ಕೇಳಿದ್ದಾರೆಯೇ? ಪ್ರತಿಪಕ್ಷಗಳ ಜತೆ ಚರ್ಚೆ ಮಾಡಿದ್ದಾರೆಯೇ? ಅಥವಾ ನೀರು ಬಿಡುವಂತೆ ಸರ್ಕಾರಕ್ಕೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಇಲ್ಲವೇ ಸುಪ್ರೀಂ ಕೋರ್ಟ್ ನಿರ್ದೇಶನ ಇದೆಯೇ? ಹಾಗೇನಾದರೂ ಇದ್ದರೆ ಜನತೆಗೆ ತೀಸಬೇಕು ಎಂದು ಒತ್ತಾಯ ಮಾಡಿದರು.
ಕುಮಾರಸ್ವಾಮಿ ಅವರು ಅವರ ಕಾಲದಲ್ಲಿ ನೀರು ಬಿಟ್ಟಿಲ್ವಾ? ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಅವರಿಗೆ ತಿಳಿವಳಿಕೆ ಕೊರತೆ ಇದೆ. ನಾನು ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡಿಗೆ ನೀರು ಹರಿಸಿದ್ದು ನಿಜ. ಆಗ ನಮ್ಮಲ್ಲಿ ಯಥೇಚ್ಛವಾಗಿ ನೀರು ಇತ್ತು. ಸಂಕಷ್ಟದ ಪರಿಸ್ಥಿತಿ ಇರಲಿಲ್ಲ. ದೇವೇಗೌಡರ ಕಾಲದಲ್ಲಿಯೂ ಕೇಂದ್ರ ಸರ್ಕಾರದ ಮನವಿ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೀರು ಬಿಡಲಾಗಿತ್ತು. ಏಕಪಕ್ಷೀಯವಾಗಿ ಹಿಂದಿನ ಯಾವ ಸರ್ಕಾರವೂ ನಿರ್ಧಾರ ಕೈಗೊಂಡು ಸರ್ವಾಧಿಕಾರಿ ಮನೋಭಾವದಿಂದ ಜನರ ಸಂಕಷ್ಟ ಲೆಕ್ಕಿಸದೆ ನೆರೆ ರಾಜ್ಯಕ್ಕೆ ನೀರು ಹರಿಸಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೇಕೆದಾಟು ಎಲ್ಲಗೆ ಬಂತು?ಕಾಂಗ್ರೆಸ್‌ನವರು ಮೇಕೆದಾಟ ಪಾದಯಾತ್ರೆ ಮಾಡಿದರು, ಅದು ಎಲ್ಲಿಗೆ ಬಂತು? ಚಿಕನ್ ಲೆಗ್, ಮಟನ್ ಪೀಸ್ ತಿಂದು ಹೋರಾಟ ಮಾಡಿದ್ದು ಅಷ್ಟೇ ಆಯಿತು. ಡಿಎಂಕೆ ನಿಮ್ಮ ಮಿತ್ರಪಕ್ಷ ಅಲ್ಲವೇ? ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ನಿಮ್ಮ ಸ್ನೇಹಿತರೇ ಅಲ್ಲವೇ? ಕೊಟ್ಟು ತಗೆದುಕೊಳ್ಳುವ ಸಂಬಂಧ ಮಾಡುತ್ತಾ ಇದ್ದೀರಲ್ಲಾ? ಮೇಕೆದಾಟು ಮಾಡಿ ಎಂದು ಟಾಂಗ್ ಕೊಟ್ಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
