ಬೆಂಗಳೂರು:ರಾಜ್ಯದಲ್ಲಿ ಮತ್ತೊಮ್ಮೆಯಶಸ್ವಿ ನೀಲಿ ಕ್ರಾಂತಿಗೆ ಸರ್ಕಾರ ಐದು ಯೋಜನೆಗಳನ್ನು ಹಾಕಿಕೊಂಡಿದೆ. ಆ ಮೂಲಕ ಮೀನುಗಾರಿಕೆಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ಮತ್ಸ್ಯ ಕ್ರಾಂತಿಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ಮೀನು ಊಟದ ಹೋಟೆಲ್:ಮೀನು ಊಟದ ಪ್ರಿಯರಿಗೆ ವಿವಿಧ ಖಾದ್ಯಗಳನ್ನು ಒದಗಿಸುವ ಸಲುವಾಗಿ ತಾಲೂಕು ಮಟ್ಟದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೀನು ಊಟದ ಹೋಟೆಲ್​ಗಳನ್ನು ಆರಂಭಿಸಲಾಗುತ್ತದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಆರು ಕಡೆಗಳಲ್ಲಿ ಬಿಬಿಎಂಪಿ ಹಾಗೂ ಬಿಡಿಎ ಜಾಗದಲ್ಲಿ ಆರಂಭಿಸಲಾಗುತ್ತದೆ. ಇಲಾಖೆಗೆ ಅನುದಾನದ ಕೊರತೆ ಇರುವುದರಿಂದ ಬಿಬಿಎಂಪಿ ಹಾಗೂ ಬಿಡಿಎ ಜತೆಗೆ ಮಾತುಕತೆ ನಡೆಸಿದ್ದು ಒಪ್ಪಿಗೆ ಸಿಕ್ಕಿದೆ ಎಂದು ಅಂಗಾರ ತಿಳಿಸಿದರು.
ಮೀನು ಉತ್ಪಾದನೆ:ರಾಜ್ಯದಲ್ಲಿರುವ ಜಲಾಶಯಗಳಲ್ಲಿ ಮೀನು ಉತ್ಪಾದನೆ ಕುಂಟುತ್ತಾ ಸಾಗುತ್ತಿದ್ದು, ಗರಿಷ್ಠ ಪ್ರಮಾಣದ ಮೀನು ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಗಿದೆ. ಮೀನು ಮರಿ ಉತ್ಪಾದನೆ ರಾಜ್ಯದಲ್ಲಿ ನಿಂತು ಹೋಗುತ್ತಿದ್ದು, ಬೇರೆ ರಾಜ್ಯಗಳಿಂದ ಆಮದು ಮಾಡಿಕೊಳ್ಳಬೇಕಾದ ಸ್ಥಿತಿ ಇದೆ. ಆದ್ದರಿಂದ ರಾಜ್ಯದಲ್ಲಿಯೇ ಮೀನು ಮರಿ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತದೆ. ಆಲಮಟ್ಟಿ ಜಲಾಶಯದ ಸಮೀಪ 25 ಎಕರೆ ಜಾಗ ಸಿಕ್ಕಿದೆ. ಅದೇ ರೀತಿಯಲ್ಲಿ ಬೇರೆ ಬೇರೆ ಜಲಾಶಯಗಳ ಬಳಿಯಲ್ಲೂ ಮೀನು ಮರಿ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವುದು ಎಂದರು. ಆಯಾ ಜಿಲ್ಲೆಯ ಅಗತ್ಯಗಳಿಗೆ ತಕ್ಕಂತೆ ಆಯಾ ಜಿಲ್ಲೆಗಳ ವಿಶಿಷ್ಟ ಮೀನಿನ ತಳಿಗಳನ್ನು ಅಭಿವೃದ್ದಿಪಡಿಸುವುದು ನಮ್ಮ ಉದ್ದೇಶ ಎಂದು ವಿವರಿಸಿದರು.
ಒಳನಾಡಿನಲ್ಲಿ ಅಭಿವೃದ್ಧಿ:ಒಳನಾಡಿನಲ್ಲಿಯೂ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಆ ನಿಟ್ಟಿನಲ್ಲಿ ಎಲ್ಲೆಲ್ಲಿ ಮೀನು ಉತ್ಪಾದನೆಗೆ ಸಾಧ್ಯವೋ ಅದೆಲ್ಲವನ್ನೂ ಮಾಡಲಾಗುತ್ತದೆ. ಗ್ರಾಹಕರಿಗೆ ಉತ್ತಮ ದರ್ಜೆಯ ಮೀನು ಕರಾವಳಿ ಮಾತ್ರವಲ್ಲದೇ ಒಳನಾಡಿನಲ್ಲಿಯೂ ಸಿಗಬೇಕು ಎಂಬುದು ಸರ್ಕಾರದ ಉದ್ದೇಶವೆಂದು ಸಚಿವ ಅಂಗಾರ ಹೇಳಿದರು.
ತಡೆಗೋಡೆಗಳ ನಿರ್ಮಾಣ:ಕರಾವಳಿ ಭಾಗದಲ್ಲಿ ಕಡಲ ಕೊರೆತದಿಂದ ಅಪಾರ ನಷ್ಟವಾಗುತ್ತಿದ್ದು ತಡೆಗೋಡೆಗಳನ್ನು ನಿರ್ವಿುಸುವ ಮೂಲಕ ತಾತ್ಕಾಲಿಕವಾಗಿ ಸಮಸ್ಯೆ ನಿವಾರಣೆ ಮಾಡಿದರೂ ಕೆಲವೇ ಕಾಲದಲ್ಲಿ ಅದು ಮರುಕಳಿಸುತ್ತಿದೆ. ಇದೇ ಕಾರಣಕ್ಕಾಗಿ ಉಲ್ಲಾಳದ ಬಟ್ಟಂಪಾಡಿ ಬಟ್ಟಂಪಾಡಿಯಲ್ಲಿ ಸೀ ವೇವ್ ಬ್ರೇಕರ್ ತಂತ್ರಜ್ಞಾನ ಅಳವಡಿಸಲಾಗುವುದು. ಇದೇ ರೀತಿ ಮರವಂತೆಯಲ್ಲೂ ಪ್ರತ್ಯೇಕ ತಂತ್ರಜ್ಞಾನ ಬಳಸಿ ಸಮುದ್ರ ಕೊರೆತವನ್ನು ತಡೆಗಟ್ಟಲಾಗುವುದು. ಈ ತಂತ್ರಜ್ಞಾನ ಬೇರೆ ರಾಜ್ಯಗಳಲ್ಲಿ ಯಶಸ್ವಿಯಾಗಿದ್ದು ನಮ್ಮಲ್ಲೂ ಪರಿಣಾಮಕಾರಿಯಾಗಲಿದೆ ಎಂದು ಹೇಳಿದರು.
ತನಿಖೆ:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಮುದ್ರ ಕೊರೆತ ತಡೆಗಟ್ಟಲು ಜಾರಿಗೊಳಿಸಿದ ಮುನ್ನೂರೈವತ್ತು ಕೋಟಿ ರೂ. ವೆಚ್ಚದ ಕಾಮಗಾರಿ ಕಳಪೆಯಾಗಿದ್ದು ಈ ಸಂಬಂಧ ತನಿಖೆ ನಡೆಸಲು ಸರ್ಕಾರ ತೀರ್ವನಿಸಿದೆ. ಸೆ. 10ರೊಳಗಾಗಿ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ವಾಣಿಜ್ಯ ವಹಿವಾಟುಗಳಿಗಾಗಿ ಕೊಚ್ಚಿನ್ ಸೇರಿ ಬೇರೆ ಬಂದರುಗಳ ಮೇಲೆ ನಾವು ಹೆಚ್ಚು ಅವಲಂಬಿತವಾಗಿದ್ದೇವೆ. ಈಗ ಮಂಗಳೂರು ಬಂದರನ್ನು ಅಭಿವೃದ್ಧಿಪಡಿಸಿ ವಾಣಿಜ್ಯ ಚಟುವಟಿಕೆಗಳ ಕೇಂದ್ರ ಬಿಂದುವನ್ನಾಗಿ ಮಾಡಲು ತೀರ್ವನಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ವಿವರಿಸಿದರು. ಬಂದರಿನಲ್ಲಿ ಹೆಚ್ಚು ಹಡಗು, ದೋಣಿಗಳು ಬಂದು ತಂಗಲು ಅವಕಾಶ ಮಾಡಿಕೊಡಲಾಗುವುದು. ಆ ಮೂಲಕ ವಾಣಿಜ್ಯ ಚಟುವಟಿಕೆಗಳಿಗೆ, ಆಮದು-ರಪ್ತು ಕಾರ್ಯಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಸಚಿವ ಎಸ್. ಅಂಗಾರ ಅಭಿಪ್ರಾಯಪಟ್ಟರು.
ಮಾರುಕಟ್ಟೆ ವ್ಯವಸ್ಥೆ:ಮೀನುಗಾರಿಕೆ ಜತೆಗೆ ಮಾರುಕಟ್ಟೆ ಒದಗಿಸುವುದೂ ಅಷ್ಟೇ ಮುಖ್ಯವಾಗಿದ್ದು, ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನು ಹರಾಜು ಮುಗಿದ ಕೂಡಲೇ ಬೆಳಗ್ಗೆ 7 ಗಂಟೆ ಒಳಗೆ ಎಲ್ಲ ತಾಲೂಕುಗಳಿಗೆ ಮೀನು ತಲುಪಿಸಲಾಗುತ್ತದೆ. ಅಲ್ಲಿಂದ ಹಳ್ಳಿಗಳಿಗೆ ಎಂಟು ಗಂಟೆಯೊಳಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಸೋಲಾರ್ ಪ್ಯಾನಲ್ ಅಳವಡಿಸಿರುವ ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಇರುವ ಮೂರು ಮತ್ತು ನಾಲ್ಕು ಚಕ್ರದ ವಾಹನಗಳನ್ನು ಒದಗಿಸಲಾಗುವುದು. ಅದೇ ಮಾದರಿಯನ್ನು ಉಳಿದ ಕಡೆಗೂ ವಿಸ್ತರಿಸುವ ಉದ್ದೇಶವಿದೆ. ಸುಮಾರು 1500 ವಾಹನಗಳ ಅಗತ್ಯವಿದೆ ಎಂದು ಅಂಗಾರ ವಿವರಿಸಿದರು.
ಅಜಿತ್ ದೋವಲ್​ಗೆ ಭದ್ರತಾ ವೈಫಲ್ಯ, ಎನ್​ಎಸ್​​ಎ ಸೆಕ್ಯುರಿಟಿಯಿಂದ ಮೂವರು ಕಮಾಂಡೋಗಳ ಎತ್ತಂಗಡಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
