
ಬೆಂಗಳೂರು:ಪ್ರಜ್ವಲ್ ರೇವಣ್ಣ ವಿರುದ್ದ ಕ್ರಮ ತೆಗೆದುಕೊಳ್ಳಲು ಯಾವ ತಕರಾರಿಲ್ಲ. ಆದರೆ, ನಮ್ಮ ಕುಟುಂಬಕ್ಕೆ ರಾಜಕೀಯ ಹಿನ್ನೆಡೆ ಉಂಟುಮಾಡಲು, ಎಚ್.ಡಿ.ರೇವಣ್ಣ ವಿರುದ್ದ ಪ್ರಕರಣವನ್ನು ಸೃಷ್ಟಿ ಮಾಡಲಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.ಪ್ರಜ್ವಲ್ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಅವರು, ಪ್ರಜ್ವಲ್ ರೇವಣ್ಣ ಅವರಿಗೆ ಈ ನೆಲದ ಕಾನೂನು ಪ್ರಕಾರ ಏನು ಶಿಕ್ಷೆ ಇದೆಯೊ ಅದು ಆಗಲಿ ಎಂದಿದ್ದಾರೆ.ಪ್ರಜ್ವಲ್ ಮತ್ತು ಎಚ್.ಡಿ.ರೇವಣ್ಣ ಅವರ ಸಂಬಂದಿಸಿದ ಎಲ್ಲ ಘಟನೆಗಳನ್ನು ಗಮನಿಸಿದ್ದೇನೆ. ಪ್ರಜ್ವಲ್ ಹೊರಗೆ ಹೋಗಿದ್ದಾರೆ. ಈ ಘಟನೆಗಳ ಬಗ್ಗೆ ನಮ್ಮ ಕುಟುಂಬದ ಪರವಾಗಿ ಕುಮಾರಸ್ವಾಮಿ ಮಾತನಾಡಿ, ಇದರಲ್ಲಿ ಯಾರನ್ನು ರಕ್ಷಿಸುವ ಅಗತ್ಯವಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.ಎಚ್.ಡಿ.ರೇವಣ್ಣನವರ ಬಗ್ಗೆ ಪ್ರಕರಣ ಸೃಷ್ಟಿ ಮಾಡಿರುವುದು ರಾಜ್ಯದ ಜನತೆಗೆ ಗೊತ್ತಿದೆ. ಯಾವ ರೀತಿ ಪ್ರಕರಣ ದಾಖಲು ಮಾಡಿದ್ದಾರೆ ಎನ್ನುವುದು ತಿಳಿದಿದೆ. ಇದರ ಹಿಂದೆ ಅನೇಕರಿದ್ದಾರೆ ಎನ್ನುವ ಮಾಹಿತಿಯೂ ಇದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಬಿಡಿಸಿ ಬಿಡಿಸಿ ಹೇಳಿದ್ದಾರೆ. ನಾನೇನು ಈ ಬಗ್ಗೆ ಹೆಚ್ಚು ಹೇಳುವ ಅಗತ್ಯವಿಲ್ಲ ಎಂದರು.ಈಗ ನ್ಯಾಯಾಲಯ ರೇವಣ್ಣನವರಿಗೆ ಜಾಮೀನು ಕೊಟ್ಟಿದೆ. ನಾಡಿದ್ದು ಮತ್ತೊಂದು ಜಾಮೀನಿನ ತೀರ್ಪು ಬಾಕಿ ಇದೆ. ಯಾವ ರೀತಿ ಏನೇನು ನಡೆಯುತ್ತಿದೆ ಎನ್ನುವುದನ್ನು ನಾನು ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ ಎಂದರು.ಪ್ರಕರಣದಲ್ಲಿ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ. ಈ ಲೈಂಗಿಕದೌರ್ಜನ್ಯ ಪ್ರಕರಣದಲ್ಲಿ ಯಾವ ಹೆಣ್ಣುಮಕ್ಕಳಿಗೆ ಅನ್ಯಾಯವಾಗಿದೆ. ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಲುಕಿದ್ದಾರೆ. ಅವರಿಗೆಲ್ಲಾ ಪರಿಹಾರ ನೀಡಬೇಕು ಎಂದರು.ರಾಜಕೀಯ ಷಡ್ಯಂತ್ರ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಯಾರು ಏನೆಲ್ಲಾ ಮಾಡುತ್ತಿದ್ದಾರೋ ಮಾಡಲಿ. ಕುಮಾರಸ್ವಾಮಿ ಅವರಿಗೆ ಎಲ್ಲವನ್ನು ಎದುರಿಸುವ ಶಕ್ತಿ ಇದೆ. ಹಾಗಾಗಿ ಎಲ್ಲವನ್ನು ರಾಜಕೀಯವಾಗಿ ಎದುರಿಸುತ್ತಾರೆ ಎಂದರು.ನಾನು ಸಹ ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ಪ್ರಚಾರ ಮಾಡಿದ್ದೇನೆ. ಫಲಿತಾಂಶ ಬರಲಿ, ನಂತರ ಮಾತನಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಪೆನ್‌ಡ್ರೈವ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೆಸರು ಹೇಳಲು ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ 100 ಕೋಟಿ ರೂ. ಆಮಿಷವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ನೀಡಿದ್ದರು ಎನ್ನುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಸಹ ದೇವರಾಜೇಗೌಡರವರ ಮಾತುಗಳನ್ನು ಮಾಧ್ಯಮಗಳಲ್ಲಿ ಕೇಳಿದ್ದೇನೆ, ನೋಡಿದ್ದೇನೆ. ಈ ಬಗ್ಗೆ ಪ್ರತಿಕ್ರಿಯಿಸಲ್ಲ. ಕುಮಾರಸ್ವಾಮಿಯವರೇ ಈ ಬಗ್ಗೆ ಮಾತನಾಡಿದ್ದಾರೆ. ಅವರೇ ಎಲ್ಲವನ್ನು ಸಮರ್ಥವಾಗಿ ಎದುರಿಸಲಿದ್ದಾರೆ ಎಂದರು.ನೀವುಗಳು ನನ್ನ ಪ್ರತಿಕ್ರಿಯೆಗಾಗಿ ಕಾದು ಕುಳಿತಿದ್ದೀರಿ. ನೀವು ಏನು ಸುದ್ದಿ ಮಾಡಿಕೊಳ್ಳಬೇಕೋ ಅದಕ್ಕೆ ಸ್ವತಂತ್ರರಿದ್ದೀರಿ. ಈಗ ಹೆಚ್ಚು ಮಾತನಾಡಲ್ಲ. ನಾನು ಏನು ಹೇಳಬೇಕು ಅನ್ನುವುದು ಜೂ.4ರ ಬಳಿಕ ಲೋಕಸಭಾ ಚುನಾವಣೆಯ ಫಲಿತಾಂಶ ಬರಲಿ, ನಂತರ ನಿಮ್ಮನ್ನೆಲ್ಲ ಕರೆದು ಮಾತನಾಡುತ್ತೇನೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
