ಬೆಳಗಾವಿ:ಬೆಳಗಾವಿ ಎಸಿ ಕಚೇರಿಯಲ್ಲಿ ‌ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ‌ಅಶೋಕ‌ ಮಣ್ಣಿಕೇರಿ (48) ‌ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅವರು ಊಟ ಮಾಡಿ ಮನೆಯಲ್ಲಿ ಮಲಗಿದ್ದಾಗ‌ ತಡರಾತ್ರಿ ತೀವ್ರ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಶೋಕ ಮಣ್ಣಿಕೇರಿ, ಬೆಳಗಾವಿಯ ಕ್ಲಬ್ ರಸ್ತೆಯ ತಮ್ಮ ಮನೆಯಲ್ಲಿ ‌ಮಲಗಿದ್ದಾಗ ಈ ಘಟನೆ ನಡೆದಿದ್ದು ತಕ್ಷಣವೇ ಅವರನ್ನು ಕುಟುಂಬಸ್ಥರು ಕೆಎಲ್ಇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ದುರದೃಷ್ಟವಶಾತ್​​​ ಚಿಕಿತ್ಸೆ ‌ಫಲಿಸದೇ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಆದರೆ ಠಾಣೆ ಮೆಟ್ಟಿಲೇರಿದ ತಹಶೀಲ್ದಾರ್ ಕುಟುಂಬಸ್ಥರು, ಅಶೋಕ್ ಮಣ್ಣಿಕೇರಿ ಅವರ ಪತ್ನಿ ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ.
ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬ ವಾಸವಿತ್ತು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಪತ್ನಿ ಹಾಗೂ ಸಹೋದರ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ ತನಿಖೆಗೆ ಕುಟುಂಬಸ್ಥರು ಒತ್ತಾಯ ಮಾಡುತ್ತಿದ್ದು ಬೆಳಗಾವಿಯ ಕ್ಯಾಂಪ್ ಠಾಣೆಗೆ ಮೃತರ ಸಹೋದರಿ ದೂರು ನೀಡಿದ್ದಾರೆ. ಸದ್ಯ ಕ್ಯಾಂಪ್ ಠಾಣೆ ಎದುರು ಮೃತರ ಸ್ನೇಹಿತರು ಹಾಗೂ ಸಂಬಂಧಿಕರು ಸೇರಿದ್ದಾರೆ.
ಬೆಳಗಾವಿಯ ಕ್ಯಾಂಪ್ ಠಾಣೆ ಎದುರು ಮೃತ ತಹಶೀಲ್ದಾರ್ ಅವರ ಹೆಂಡತಿಯ ತಮ್ಮನ ಮೇಲೆ ಮೃತರ ಸಂಬಂಧಿಕರು ಹಾಘೂ ಸ್ನೇಹಿತರು ಹಲ್ಲೆಗೆ ಯತ್ನಿಸಿದ್ದಾರೆ. ಅನುಮಾನಾಸ್ಪದ ಸಾವು ಎಂದು ದೂರು ದಾಖಲಿಸಲು ಕಟುಂಬಸ್ಥರು ಹಾಗೂ ಸ್ನೇಹಿತರು ಠಾಣೆಗೆ ಬಂದಿದ್ದರು. ಇದೇ ವೇಳೆ ಠಾಣೆ ಎದುರು ಸಾಮ್ಯುಯಲ್ ಪ್ರತ್ಯಕ್ಷನಾಗಿದ್ದು ಅವರ ಮೇಲೆ ಸಂಬಂಧಿಕರು ಹಾಗೂ ಸ್ನೇಹಿತರು ಹಲ್ಲೆ ನಡೆಸಿದ್ದಾರೆ.
ಅಶೋಕ್ ಮಣ್ಣೀಕೇರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಕರಾಗಿದ್ದರು. 2018ರ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗೆದ್ದಾಗ ಅವರ ಆಪ್ತ ಸಹಾಯಕರಾಗಿದ್ದರು. ಅಶೋಕ್ ಮಣ್ಣಿಕೇರಿ ಅಕಾಲಿಕ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದು “ಅಶೋಕ ಮಣ್ಣಿಕೇರಿ ನಿಧನ ತೀವ್ರ ನೋವು ಉಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಹೇಳಿ ಕಂಬನಿ ಮಿಡಿದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
