ಬೆಂಗಳೂರುರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯವಿರುವ ಹುದ್ದೆಗಳಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ಮೂಲಕ ಅತಿಥಿ ಉಪನ್ಯಾಸಕರ ನೇಮಿಸಿಕೊಳ್ಳುವವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹಿಂದಿನ ವರ್ಷ ಕರ್ತವ್ಯ ನಿರ್ವಹಿಸಿದ ಅಭ್ಯರ್ಥಿಗಳು ಆಯಾ ಕಾಲೇಜಿನಲ್ಲಿಯೇ ಮುಂದುವರಿಯಲು ಇಚ್ಛಿಸಿದ್ದಲ್ಲಿ ಕೌನ್ಸೆಲಿಂಗ್ ನಡೆಸದೆ ಮುಂದುವರಿಯಲು ಅವಕಾಶ ಕಲ್ಪಿಸುವಂತೆಯೂ ನಿರ್ದೇಶನ ನೀಡಿದೆ.
ಹೀಗೆ ಮುಂದುವರಿಯುವ ಅಭ್ಯರ್ಥಿಗಳಿಗೆ ಕಂಟಿನ್ಯೂಷನ್ ಆಪ್ಷನ್ ಅನ್ನು ಆಯ್ಕೆ ಮಾಡುವ ಮುನ್ನ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಂದ ಕಾರ್ಯಭಾರದ ಮಾಹಿತಿಯನ್ನು ಪಡೆದುಕೊಳ್ಳುವಂತೆ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಬಳಿಕವೂ ಉಳಿಕೆಯಾಗುವ ಹುದ್ದೆಗಳಿಗೆ ಮುಂದಿನ ಸುತ್ತಿನಲ್ಲಿ ಕೌನ್ಸೆಲಿಂಗ್ ನಡೆಸಿ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಬಹುದು. ಯುಜಿಸಿ ನಿಗದಿ ಮಾಡಿರುವ ವಿದ್ಯಾರ್ಹತೆಗೆ ಅನುಗುಣವಾಗಿ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಈ ಮಾನದಂಡಗಳಿಗೆ ಅನುಗುಣವಾಗಿ ವೇಯ್ಟೇಜ್ ನೀಡಬೇಕು. ಸೇವಾವಧಿ ಮತ್ತು ವಿದ್ಯಾರ್ಹತೆಗೆ ಅನುಗುಣವಾಗಿ ಗೌರವಧನ ನಿಗದಿ ಮಾಡಬೇಕು. ಗೌರವಧನವು ಕನಿಷ್ಠ 31 ಸಾವಿರ ರೂ.ಗಳಿಂದ ಗರಿಷ್ಠ 40ಸಾವಿರ ರೂ,.ಗಳ ವರೆಗೆ ನಿಗದಿ ಮಾಡಲಾಗಿದೆ.
ಕಲಾ, ವಾಣಿಜ್ಯ ಮತ್ತು ಭಾಷಾ ವಿಷಯಗಳಿಗೆ ಗರಿಷ್ಠ 15 ಗಂಟೆಗಳು ಹಾಗೂ ವಿಜ್ಞಾನ ವಿಷಯಗಳು, ಪ್ರಾಯೋಗಿಕ ತರಗತಿಗಳಿರುವ ವಿಷಯಗಳಿಗೆ ಗರಿಷ್ಠ 19 ಗಂಟೆಗಳ ಕಾರ್ಯಭಾರವನ್ನು ಹಂಚಿಕೆ ಮಾಡಲಾಗುತ್ತದೆ.
ನಿಗದಿತ ಅವಧಿಗಿಂತ ಕಡಿಮೆ ಕಅರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಲಭ್ಯವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನವನ್ನು ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.
ವೇಳಾಪಟ್ಟಿ:ಆ.31 ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಸೆ.7 ಅರ್ಜಿ ಸಲ್ಲಿಸಲು ಕೊನೆಯ ಅವಕಾಶಸೆ.8 ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಸೆ.9,10 ಅರ್ಜಿಯನ್ನು ತಿದ್ದುಪಡಿ ಮಾಡಲು ಅವಕಾಶಸೆ.11 ಕಾರ್ಯಾಭಾರ ಪ್ರಕಟಸೆ.17 ಮೆರಿಟ್ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸೆಲಿಂಗ್
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twelve − two =
Remember me
