ಬೆಂಗಳೂರು:ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಹಸ್ತಕ್ಷೇಪ ನಿಲ್ಲಿಸಬೇಕು. ರಾಜ್ಯ ಸರ್ಕಾರ ರೂಪಿಸಿರುವ ಎಲ್ಲ ಯೋಜನೆಗಳಿಗೆ ಅವಶ್ಯ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟ ಸರ್ಕಾರಕ್ಕೆ ಹೋರಾಟದ ಎಚ್ಚರಿಕೆ ನೀಡಿದೆ.
ಗ್ರಾ.ಪಂ.ಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಇರುವ ಅಡ್ಡಿಗಳನ್ನು ನಿವಾರಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ.ಗ್ರಾ.ಪಂ.ಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಅನೇಕ ಕಾಯ್ದೆ ವಿರೋಧಿ ನಿಯಮಗಳು, ಸುತ್ತೋಲೆಗಳು, ನಿರ್ಣಯಗಳು, ಮೇಲಧಿಕಾರಿಗಳ ನಡೆಗಳು ಕಾರಣವಾಗಿರುವುದನ್ನು ಖಂಡಿಸಿ ಫೆ.8, 2024 ರಂದು ಒಕ್ಕೂಟ ಬೆಂಗಳೂರು ಚಲೋ ನಡೆಸಿತ್ತು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಇದುವರೆಗೂ ನಮ್ಮ ಯಾವುದೇ ಬೇಡಿಕೆಗಳನ್ನು ಈಡೆರಿಸಿಲ್ಲ. ನಮ್ಮ ಬೇಡಿಕೆಗಳ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ನೀಡಿ ಎಂದು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗಳನ್ನು ಕೇಳಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸುಮಾರು ಒಂದು ಲಕ್ಷ ಜನಪ್ರತಿನಿಧಿಗಳಿಂದ ಕೂಡಿದ, ಆರು ಸಾವಿರದಷ್ಟು ಸ್ಥಳೀಯ ಸರ್ಕಾರಗಳ ಮನವಿಗೆ ಕಿವುಡಾಗಿ ವರ್ತಿಸಿದ್ದಾರೆ. ಇದು ಸರ್ಕಾರದಪ್ರಜಾತಂತ್ರ ವಿರೋಧಿ ನಡೆಯಾಗಿರುತ್ತದೆ.
ಗ್ರಾಮ ಪಂಚಾಯಿತಿಗಳು ಹೆಸರಿಗೆ ಮಾತ್ರ ಇದ್ದು, ಬೆಂಗಳೂರಿನಲ್ಲಿ ಕೇಂದ್ರೀಕರಣಗೊಂಡಿರುವ ಅಡಳಿತವನ್ನು ಸಂವಿಧಾನ ಮತ್ತು ಗ್ರಾಮ ಸ್ವರಾಜ್ಮತ್ತು ಪಂಚಾಯತ್ ರಾಜ್ ಕಾಯ್ದೆ ಅನ್ವಯ ವಿಕೇಂದ್ರಿಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನು ಅಕ್ಟೋಬರ್ 2ರ ಒಳಗಾಗಿ ಈಡೇರಿಸಬೇಕು. ಇಲ್ಲದೇ ಇದ್ದಲ್ಲಿ ಅಂದಿನಿಂದಲೇ ಗ್ರಾಮ ಸ್ಪರಾಜ್ಯಕ್ಕಾಗಿ ಗ್ರಾಮ ಪಂಚಾಯತಿ ಸದಸ್ಯರ ನಿರ್ಣಾಯಕ ಹೋರಾಟವನ್ನು ಆರಂಭಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದ್ದಾರೆ.
-ರಾಜ್ಯ ಸರ್ಕಾರ ರೂಪಿಸಿರುವ ಎಲ್ಲ ಯೋಜನೆಗಳಿಗೆ ಅನುದಾನ ನೀಡಿ-ಬೇಡಿಕೆ ಈಡೇರದಿದ್ದರೆ ಅಕ್ಟೋಬರ್ 2 ರಿಂದ ಹೋರಾಟ-ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟದಿಂದ ಸರ್ಕಾರಕ್ಕೆ ಎಚ್ಚರಿಕೆ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three − 1 =
Remember me
