ಬೆಂಗಳೂರು:ರಾಜ್ಯದಲ್ಲಿ ಜೂನ್ ಹಾಗೂ ಆಗಸ್ಟ್ ತಿಂಗಳಲ್ಲಿ ಅವಧಿ ಮುಕ್ತಾಯಗೊಳ್ಳುವ ಸುಮಾರು 5,800 ಗ್ರಾಮ ಪಂಚಾಯಿತಿಗಳಿಗೆ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ 6,025 ಗ್ರಾಮ ಪಂಚಾಯಿತಿಗಳಲ್ಲಿದ್ದು, ಸುಮಾರು 5,800 ಗ್ರಾಪಂಗಳ ಅವಧಿ ಜೂನ್-ಆಗಸ್ಟ್​ನಲ್ಲಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ನೇಮಕ ಅಥವಾ ಆಡಳಿತ ಸಮಿತಿ ನೇಮಕ ಮಾಡುವ ಚರ್ಚೆ ನಡೆದಿತ್ತು. ಈಗದಕ್ಕೆ ತೆರೆ ಬಿದಿದೆ. ರಾಜ್ಯ ಚುನಾವಣಾ ಅಯೋಗ ಕೂಡ ಕರೊನಾ ಕಾರಣಕ್ಕೆ ಅಸಾಧಾರಣ ಪರಿಸ್ಥಿತಿ ಎಂದು ಪರಿಗಣಿಸಿ ಗ್ರಾಪಂಗಳ ಸಾರ್ವತ್ರಿಕ ಚುನಾವಣೆಯನ್ನು ಮುಂದೂಡಿತ್ತು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ, ಗ್ರಾಪಂಗಳಿಗೆ ಚುನಾವಣೆ ನಡೆಸಲು ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಚುನಾವಣೆ ನಡೆಯುವವರೆಗೆ ಆಡಳಿತಾಧಿಕಾರಿಗಳ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು. ಕರೊನಾ ಕಾರಣ ಮುಂದೂಡಲ್ಪಟ್ಟಿದ್ದ ಸಹಕಾರ ಸಂಘದ ಚುನಾವಣೆ ನಡೆಸಲು ಸಹ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ರಾಜ್ಯದ ಸಕ್ಕರೆ ಕಾರ್ಖಾನೆಗಳನ್ನು ಹೊರತುಪಡಿಸಿ ಉಳಿದ ಸಹಕಾರ ಸಂಘಗಳ ಚುನಾವಣೆ ನಡೆಸಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ಸಕ್ಕರೆ ಕಾರ್ಖಾನೆಗಳ ಸದಸ್ಯರ ಸಂಖ್ಯೆ 2-3 ಸಾವಿರ ದಷ್ಟಿರುವುದರಿಂದ ಕರೊನಾ ಸಂದರ್ಭದಲ್ಲಿ ಈ ಸಂಘಗಳ ಚುನಾವಣೆ ಸಾಧುವಲ್ಲ ಎಂದು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಇದನ್ನೂ ಓದಿ:ಕೇಜಿಗಟ್ಟಲೆ ಚಿನ್ನ, ಬೆಳ್ಳಿ, ಸೈಟು, ಫ್ಲ್ಯಾಟು, ಮನೆಗಳು… ಬ್ರಹ್ಮಾಂಡ ಭ್ರಷ್ಟಾಚಾರ ಬಯಲು
ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಮುಗಿಯುತ್ತಿದ್ದಂತೆ ತಾರಕಕ್ಕೇರಿತು ಅರ್ಜುನ್​ ಸರ್ಜಾ ಸಿಟ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 16 =
Remember me
