ಬೆಂಗಳೂರು:ಗ್ರಾಮ ಪಂಚಾಯಿತಿ ಗಾದಿ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿತರೇ ಗಮನಿಸಿ. ಈ ಬಾರಿ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ 5 ವರ್ಷ ಇರಲ್ಲ!
ಹೀಗಂತ ರಾಜ್ಯ ಚುನಾವಣಾ ಆಯೋಗವೇ ಹೊರಡಿಸಿರುವ ಕರ್ನಾಟಕ ರಾಜ್ಯಪತ್ರದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. 2015ರಲ್ಲಿ ಗ್ರಾಪಂ‌ ಅಧ್ಯಕ್ಷ- ಉಪಾಧ್ಯಕ್ಷರ ಅಧಿಕಾರಾವಧಿಯನ್ನು 5 ವರ್ಷಕ್ಕೆ ನಿಗದಿ ಪಡಿಸಲಾಗಿತ್ತು. 2020ನೇ ಸಾಲಿನ ಗ್ರಾಪಂ ಚುನಾವಣೆ ಮುಗಿದ ಬಳಿ ಈ ಅವಧಿಯನ್ನು ಮೊಟಕುಗೊಳಿಸಲಾಗಿದೆ.
ಅಂದರೆ ಈ ಬಾರಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರನ್ನು ಎರಡೂವರೆ ವರ್ಷಕ್ಕೆ ಮಾತ್ರವೇ ಆಯ್ಕೆ ಮಾಡಲಾಗುತ್ತದೆ. ಒಟ್ಟು 5 ವರ್ಷದಲ್ಲಿ ಮೊದಲ 30 ತಿಂಗಳ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮೀಸಲಾತಿ ಮಾರ್ಗಸೂಚಿಯಂತೆ ಮೀಸಲಾತಿ ನಿಗದಿ ಮಾಡಬೇಕು. ಅದರಂತೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಇದನ್ನೂ ಓದಿರಿಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಪೂರ್ಣ ಪಟ್ಟಿ
ತದನಂತರ ಇನ್ನುಳಿದ ಎರಡೂವರೆ ವರ್ಷಕ್ಕೆ 2ನೇ ಹಂತದಲ್ಲಿ ಮತ್ತೊಂದು ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನ ಆಯ್ಕೆ ಮಾಡಲಾಗುತ್ತದೆ. ಈ ಬದಲಾವಣೆ 5 ವರ್ಷ ಕಾಲ ಒಬ್ಬರೇ ಗ್ರಾಪಂ ಆಡಳಿತದ ಚುಕ್ಕಾಣಿ ಹಿಡಿಯುವ ಕನಸು ಕಂಡಿದ್ದವರಿಗೆ ನಿರಾಶೆ ಮೂಡಿಸಿದೆ.
ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಯ ಸರಿ ಸುಮಾರು‌ 1/3ರ ಹುದ್ದೆಗಳನ್ನು ಹಿಂದುಳಿದ ವರ್ಗದವರಿಗೆ ಮೀಸಲಿಡತಕ್ಕದ್ದು ಎಂದು ಕೂಡ ರಾಜ್ಯ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

ಕೋವಿಡ್​ ನಿಯಂತ್ರಿಸಲು ‘ಕೆಂಪಿರುವೆ’ಗಾಗಿ ಹುಡುಕಾಟ ಶುರುವಾಯ್ತು!

54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − twenty =
Remember me
