ಮೈಸೂರು:ಆಧಾರ್​ ತಿದ್ದುಪಡಿ ಮಾಡಿ ಅಪ್ರಾಪ್ತೆಯನ್ನು ಅದ್ಧೂರಿಯಾಗಿ ಮದುವೆ ಮಾಡಿಕೊಂಡಿರುವ ಆರೋಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ವಿರುದ್ಧ ಕೇಳಿಬಂದಿದೆ. ಈ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ಹಾಡ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹರೀಶ್ ಕುಮಾರ್ ಎಂಬುವರ ವಿರುದ್ಧ ಆರೋಪ ಕೇಳಿಬಂದಿದೆ. ಹರೀಶ್ ಅರಿಯೂರು ಗ್ರಾಮದ ನಿವಾಸಿ. ಅವರ ಗ್ರಾಮಸ್ಥರೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು, ಹರೀಶ್​ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:Testosterone Hormone: ಪುರುಷರಲ್ಲಿ ಟೆಸ್ಟೋಸ್ಟೆರಾನ್ ಹೆಚ್ಚಿಸಿಕೊಳ್ಳಲು ಇಲ್ಲಿವೆ ಉತ್ತಮ ಆಹಾರಗಳು…
ಆಧಾರ್ ಕಾರ್ಡ್​ನಲ್ಲಿನ ಹುಟ್ಟಿದ ದಿನಾಂಕವನ್ನು ತಿದ್ದುಪಡಿ ಮಾಡಿ ಅಪ್ರಾಪ್ತೆಯನ್ನು ಮದುವೆ ಮಾಡಿಕೊಂಡಿದ್ದಾನೆ ಎಂದು ಅರಿಯೂರು ಗ್ರಾಮಸ್ಥರು ದಾಖಲೆ ಸಮೇತ ಆರೋಪ ಮಾಡಿದ್ದಾರೆ. ಶಾಲಾ ದಾಖಾಲಾತಿಯನ್ನು ಸಾಕ್ಷಿಯಾಗಿ ನೀಡಿದ್ದು, ಅದರ ಪ್ರಕಾರ ವಧುವಿಗೆ ಇನ್ನೂ 18 ವರ್ಷ ಕೂಡ ತುಂಬಿಲ್ಲ. ಆದರೆ, ಆಧಾರ್​ ಕಾರ್ಡ್​ ತಿದ್ದುಪಡಿ ಮೂಲಕ ವಯಸ್ಸನ್ನು ಮರೆಮಾಚಿ ಮದುವೆ ಮಾಡಿಕೊಂಡಿದ್ದಾರೆ ಎಂದು ಹರೀಶ್​ ವಿರುದ್ಧ ಆರೋಪ ಮಾಡಲಾಗಿದೆ.
ಕಳೆದ ಫೆ. 15ರಂದು ನಂಜನಗೂಡಿನಲ್ಲಿ ಅದ್ಧೂರಿ ವಿವಾಹ ನೆರವೇರಿತು. ಅಂದಿನಿಂದ ಗ್ರಾಮಸ್ಥರು ಯಾಕೆ ಸುಮ್ಮನಿದ್ದರು ಎಂಬ ಪ್ರಶ್ನೆಯು ಸಹ ಕಾಡುತ್ತಿದೆ. ಮದುವೆಯಾಗಿ 7 ತಿಂಗಳು ಕಳೆದ ಬಳಿಕ ಹರೀಶ್​ ವಿರುದ್ಧ ದಾಖಲೆ ಸಮೇತ ದೂರು ನೀಡಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಪ್ರಾಪ್ತೆಯನ್ನು ಮದುವೆ ಆಗುವ ಮೂಲಕ ಉಪಾಧ್ಯಕ್ಷ ಹರೀಶ್​ ಕುಮಾರ್​ ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.
ನಂ.1 ಸ್ಥಾನಕ್ಕೆ ಮರಳಿದ ಸೆರ್ಬಿಯಾ ತಾರೆ ನೊವಾಕ್ ಜೋಕೊವಿಕ್

ಬಾಲಿ ಬಾಲಿಯೇ, ನವದೆಹಲಿ ನವದೆಹಲಿಯೇ!

ಆತ್ಮೀಯತೆಯ ಅವಲೋಕನ: ಯಾರು ಆಪ್ತರು, ಯಾರು ಅತ್ಯಾಪ್ತರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 12 =
Remember me
