ಬೆಂಗಳೂರು:ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಕಲ್ಪಿಸುವ “ಗ್ರಾಮ ಒನ್” ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದರು.
ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಸರ್ಕಾರದ ಎಲ್ಲ ಸೇವೆಗಳನ್ನು ಒಂದೇ ಸೂರಿನಡಿ ತರುವ ಪ್ರಾಯೋಗಿಕ ಯೋಜನೆ ಇದಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮ ಒನ್​ ಕೇಂದ್ರವು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ಮೈಕ್ರೋ-ಬ್ಯಾಂಕಿಂಗ್​ ವ್ಯವಸ್ಥೆಯೊಂದಿಗೆ ಮತ್ತಷ್ಟು ಸೇವೆಗಳನ್ನು ಗ್ರಾಮ ಒನ್​ ಕೇಂದ್ರಗಳಲ್ಲಿ ನೀಡಲು ಉದ್ದೇಶಿಸಿದೆ ಎಂದು ಸಿಎಂ ತಿಳಿಸಿದರು.
​ಗ್ರಾಮ ಒನ್​ನಲ್ಲಿ ಲಭ್ಯವಿರುವ ಸೇವೆಗಳು
ಇನ್ನಷ್ಟು ಸೇವೆ:ಸೇವಾಸಿಂಧು ಅಡಿಲಭ್ಯವಿರುವ ಸೇವೆಗಳು, ಸಕಾಲ ಸೇವೆಗಳು, ಸಕಾಲ ಮೇಲ್ಮನವಿ, ರಾಜ್ಯದ ವಿವಿಧ ಕೃಷಿ ಮಾರುಕಟ್ಟೆ / ಮಂಡಿ ದರಗಳ ಮಾಹಿತಿ, ಮೈಕ್ರೋ ಬ್ಯಾಂಕಿಂಗ್​, ಮಾಹಿತಿ ಹಕ್ಕು ಅಧಿನಿಯಮದಡಿ ಆನ್​ಲೈನ್​ ಅರ್ಜಿ ಹಾಗೂ ಸರ್ಕಾರವು ಕಾಲಕಾಲಕ್ಕೆ ನಿರ್ಧರಿಸುವ ಇತರೆ ಸೇವೆಗಳನ್ನೂ ಪಡೆಯಬಹುದು.
ಸಹಾಯವಾಣಿ:080-44554455
ಸರ್ಕಾರಿ ಸೇವೆಗಳು ಸಕಾಲಕ್ಕೆ ನಾಗರಿಕರಿಗೆ ತಲುಪಬೇಕೆನ್ನುವ ಸದಾಶಯದೊಂದಿಗೆ ಸಕಾಲ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಸಮಯಬದ್ಧ ಸೇವೆಗಳನ್ನು ತಂತ್ರಾಜ್ಞಾನ ಬಳಕೆಯಿಂದ ನೀಡಲು ಸಾಧ್ಯವಿದೆ. ಹಾಗಾಗಿ ಗ್ರಾಮ ಒನ್​ ಕೇಂದ್ರಗಳು ಜನಸ್ನೇಹಿ ಕೇಂದ್ರ ಆಗುವುದರಲ್ಲಿ ಸಂಶಯವಿಲ್ಲ ಎಂದು ವಿಶ್ವಾಸ ಯಡಿಯೂರಪ್ಪ ವ್ಯಕ್ತಪಡಿಸಿದರು. ವಿವಿಧ ಇಲಾಖೆಗಳ ಸೇವೆಗಳನ್ನು ಗ್ರಾಮ ಒನ್​ ಕೇಂದ್ರದಲ್ಲೇ ಪಡೆಯಬಹುದು. ಆ ಮೂಲಕ ಸಾರ್ವಜನಿಕರ ಸಮಯ ಮತ್ತು ಹಣ ಉಳಿಯಲಿದೆ. ಈ ಕೇಂದ್ರಗಳ ಸ್ಥಾಪನೆಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ ಎಂದು ಸಿಎಂ ಬಿಎಸ್​ವೈ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಮಾಯಗೊಂಡನಹಳ್ಳಿಯಲ್ಲಿ ಗ್ರಾಮ ಒನ್​ಗೆ ಸಚಿವ ಎಸ್​. ಸುರೇಶ್​ ಕುಮಾರ್​ ಚಾಲನೆ ನೀಡಿದರು.
ಹೆಜ್ಜೆ ಇಟ್ಟಲ್ಲಿ ನೀಲಿ ಬೆಳಕು! ಕರ್ನಾಟಕದ ಈ ಸ್ಥಳಕ್ಕೆ ಕಾಲಿಟ್ಟರೆ ಮಿಂಚಲಿದೆ ನೀಲಿ ಬಣ್ಣದ ಹೆಜ್ಜೆ ಗುರುತು

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ರದ್ದು! ಇದು ಹೈಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − twenty =
Remember me
