ಮಂಗಳೂರು:ಗ್ರಾಮ ಪಂಚಾಯಿತಿ ಚುನಾವಣೆಯ 2ನೇ ಹಂತದ ಮತದಾನ ಭಾನುವಾರ ನಡೆದಿದೆ. ಮತದಾನಕ್ಕೂ ಮುನ್ನವೇ ಅಭ್ಯರ್ಥಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಏಕೆ ಗೊತ್ತಾ?
ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸರು ಕಲ್ಮಡ್ಕ ಗ್ರಾಮದ ಹುಕ್ರಪ್ಪ ಯಾನೆ ನಾರಾಯಣ(38) ಎಂಬಾತನ್ನು ಬಂಧಿಸಿದ್ದಾರೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಈತನ ವಿರುದ್ಧ ಕೇಸ್​ ದಾಖಲಾಗಿದೆ.
ಸೋದರ ಸಂಬಂಧಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹುಕ್ರಪ್ಪ ಯಾನೆ ನಾರಾಯಣನ ವಿರುದ್ಧ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ರಾತ್ರಿಯೇ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು.
ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮೂರು ದಿನ ಹೆಚ್ಚಿನ ವಿಚಾರಣೆ ನಡೆಸಲು ಕಸ್ಟಡಿಗೆ ಪಡೆದಿದ್ದಾರೆ. ಈತ ಕಲ್ಮಡ್ಕ ಗ್ರಾಮದ 1ನೇ ವಾರ್ಡ್​ನಿಂದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ. ಆರೋಪಿ ಅವಿವಾಹಿತನಾಗಿದ್ದ.
ಯಾವ ಜಯಂತಿನ್ಲಾ? ಹನುಮ ಹುಟ್ಟಿದ ತಾರೀಖು‌‌ ನಿನಗೆ ಗೊತ್ತಾ? ಸುಮ್ನೆ ಚಿಕನ್​ ತಿನ್ಲಾ: ಸಿದ್ದರಾಮಯ್ಯ

ಹಳ್ಳಿ ಫೈಟ್​: ಮತದಾನದ ವೇಳೆ ಅಭ್ಯರ್ಥಿ, ನಿವೃತ್ತ ಶಿಕ್ಷಕ, ಅಜ್ಜಿ, ಮಹಿಳೆಯ ಪ್ರಾಣ ಹೊತ್ತೊಯ್ದ ಜವರಾಯ!

ರಾತ್ರಿಗಿಂತ ಹಗಲಿನಲ್ಲೇ ಕಾಂಡಂ ಮಾರಾಟ ಜಾಸ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + two =
Remember me
